14 ರಿಂದ ಸಿದ್ದರಾಮಯ್ಯ ಬಾದಾಮಿ ಪ್ರವಾಸ

0

ಬಾದಾಮಿ: ಮಾಜಿ ಸಿಎಮ್ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಇದೆ ಸೆ.14 ಮತ್ತು 15 ರಂದು ಎರಡು ದಿನಗಳ ಕಾಲ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಸೆ.14 ರಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಪ್ರವಾಹದಿಂದ ಹಾನಿಗೀಡಾದ ಹಳೆಯ ಬ್ರಿಡ್ಜ್ ವೀಕ್ಷಣೆ ಮಾಡಿದ ನಂತರ ಚೊಳಚಗುಡ್ಡ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹದಿಂದ ಹಾನಿಗೀಡಾದ ಜಮೀನುಗಳನ್ನು ವೀಕ್ಷಣೆ ಮಾಡಲಿದ್ದಾರೆ.
ನಂತರ ಮದ್ಯಾಹ್ನ 4 ಗಂಟೆಗೆ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸುವವರು. ಸಾಯಂಕಾಲ 5 ಗಂಟೆಗೆ ಸಾರ್ವಜನಿಕ ಅಹವಾಲು ಸ್ವೀಕರಿಸುವವರು. ಸೆ. 15 ರಂದು ಬೆಳಿಗ್ಗೆ 10:30 ಗಂಟೆಗೆ ಶಾಶ್ವತ ಕುಡಿಯುವ ನೀರಿನ ಕಾಮಗಾರಿಯನ್ನು ಪರಶೀಲನೆ ಮಾಡುವವರು. 11 ಗಂಟೆಗೆ ಗುಳೇದಗುಡ್ಡ ನಗರದಲ್ಲಿ ಇರುವ ಕರನಂದಿ ರಂಗ ಮಂದಿರದಲ್ಲಿ ನಡೆಯುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಶಕ್ತಿ ಚಿತ್ರ ಮಂದಿರ ಹತ್ತಿರ ಮಲ್ಟಿಜಿಮ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೋಂಡು ಹುಬ್ಬಳ್ಳಿ ಮೂಲಕ ಮತ್ತೆ ಬೆಂಗಳೂರಿಗೆ ಪ್ರಯಾಣವನ್ನು ಬೆಳೆಸುವರು ಎಂದು ಪ್ರಕಟಣೆ ತಿಳಿಸಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.