Gummata Nagari

Headlines

ಕರ್ನಾಟಕದಲ್ಲಿ ಏ. 26, ಮೇ 7 ರಂದು ಚುನಾವಣೆ ದಿನಾಂಕ ಪ್ರಕಟ

 

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು.

ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಇಂದಿನಿoದಲೇ ಜಾರಿಗೆ ಬರಲಿದೆ. ಮತ್ತೊಂದೆಡೆ, ಲೋಕಸಭೆ ಚುನಾವಣೆಗೆ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಚುನಾವಣಾ ದಿನಾಂಕ ಪ್ರಕಟವಾದ ದಿನವೇ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪ್ರಚಾರ ಕಹಳೆ ಮೊಳಗಿಸಿದ್ದಾರೆ.

ಏಪ್ರಿಲ್ 26, ಮೇ 7ರಂದು ಮತದಾನ
ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಹಾಗೂ ಮೇ 7 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿತ್ತು. 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರದಲ್ಲಿ ಮಾತ್ರ ಜಯ ಗಳಿಸಿತ್ತು. ಉಳಿದಂತೆ ಜೆಡಿಎಸ್ ಒಂದು ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನ ಗಳಿಸಿದ್ದರು.

Most Popular

To Top
error: Content is protected !!