Gummata Nagari

Headlines

ಬಾಂಬರ್ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ

 

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ.

ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ ಎನ್‌ಐಎ ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ಆರಂಭದಲ್ಲಿ ಪೊಲೀಸರು, ಎಲ್ಲಾ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಚೆಸ್ಮಾ ಹಾಕಿರುವ ದೃಶ್ಯಗಳೇ ಸಿಕ್ಕಿದ್ದವು. ಆದ್ರೆ, ಸಿಸಿಬಿ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಒಂದು ಫೋಟೋವನ್ನು ಪತ್ತೆ ಮಾಡಿದೆ. ಇದೀಗ ಅದೇ ಫೋಟೋವನ್ನು ಎನ್‌ಐಎ ಬಿಡುಗಡೆ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ (ಟ್ವೀಟ್) ಬಾಂಬರ್ ಫೋಟೋ ಹಂಚಿಕೊAಡಿರುವ ಎನ್‌ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.

ಟ್ವೀಟ್ ಮಾಡಿರುವ ಎನ್‌ಐಎ:
ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ ಎನ್‌ಐಎ ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆ(ಮಾರ್ಚ್ 05) ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದೆ. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿAದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನ ಓIಂ ಅಧಿಕಾರಿಗಳಿಗೆ ನೀಡಿದ್ದಾರೆ.

ಇನ್ನು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬAಧ ಎನ್‌ಐಎ ಅಧಿಕಾರಿಗಳು ಎಲ್ಲೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆಯ ಮಾಹಿತಿ ಮೇರೆಗೆ ಎನ್‌ಎಐ ಅಧಿಕಾರಿಗಳ ಮತ್ತೊಂದಿಷ್ಟು ತಂಡ ದೇಶಾದ್ಯಂತ ಹಲವೆಡೆ ಭರ್ಜರಿ ಕಾರ್ಯಾಚರಣೆ ನಡೆಸಿವೆ.

Most Popular

To Top
error: Content is protected !!