Gummata Nagari

Bijapur

ಸಿಂದಗಿಯಲ್ಲಿ ಅನಂತಕುಮಾರ ಹೆಗಡೆ ಹೇಳಿಕೆ ಖಂಡಿಸಿ ಕಾನಿಪದಿಂದ ಮನವಿ

 

ಸಿಂದಗಿ: ಸಂಸದ ಅನಂತಕುಮಾರ ಹೆಗಡೆ ಮಾಧ್ಯಮದವರ ಕುರಿತು ಆಳಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸುವ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ಸಿಂದಗಿ ತಾಲೂಕು ದಂಡಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು,

ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬAತೆ ನಾವು ಇರಬೇಕು, ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ, ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು, ಎಂದು ಸಿಂದಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಹಿಸಿದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮ ರಂಗವು ತನ್ನದೇಯಾದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮ ಕ್ಷೇತ್ರವನ್ನು ಹೊಗಳುವುದು ಬೇಡವಾದಾಗ ತೆಗಳುವುದು ಕೆಲವು ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನನ್ನು ಜಾರಿಗೆ ತರಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ (ಕಾ ನಿ ಪ) ಸಂಘದ ಅಧ್ಯಕ್ಷ ಆನಂದ ಎನ್. ಶಾಬಾದಿ ಮಾತನಾಡಿ, ಆನಂತಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಮಾಧ್ಯಮದವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಪಕ್ಷ ಗಂಬೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ ಮಾಧ್ಯಮ ರಂಗದಿAದ ಅವರನ್ನು ಸಾರಾಸಗಟವಾಗಿ ಮಾಧ್ಯಮದವರು ಬಹಿಷ್ಕರಿಸುವ ನಿರ್ಣಯ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಇದರಿಂದ ಇತರೆ ರಾಜಕಾರಣಿಗಳಿಗೆ ಒಂದು ಪಾಠವಾಗಲಿ ಎಂದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Most Popular

To Top
error: Content is protected !!