Gummata Nagari

Headlines

ಮುರುಘಾಮಠಕ್ಕೆ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಿವಯೋಗಿ ಕಳಸದ ನೇಮಕ

ಮುರುಘಾಮಠಕ್ಕೆ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಿವಯೋಗಿ ಕಳಸದ ನೇಮಕ

ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬAಧಿಸಿದAತೆ ಚಿತ್ರದುರ್ಗ ನಗರ ಬಳಿಯಿರುವ ಐತಿಹಾಸಿಕ ಮುರುಘಾಮಠಕ್ಕೆ ಆಡಳಿತ ಸಮಿತಿ ನೇಮಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 3 ದಿನದಲ್ಲಿ ಆಡಳಿತ ಸಮಿತಿ ನೇಮಿಸಲು ಕೋರ್ಟ್ ಸೂಚಿಸಿತ್ತು. ಫೆಬ್ರವರಿ 28ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಆಡಳಿತ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ನೇಮಕ ಮಾಡಲಾಗಿದೆ.

ಸದ್ಯ ಮುರುಘಾ ಸ್ವಾಮೀಜಿ ಜಾಮೀನು ಮೇಲಿದ್ದು, ಅವರ ನಿಯಂತ್ರಣದಲ್ಲಿರುವ ಆಡಳಿತ ಪ್ರಶ್ನಿಸಿ ಮಾಜಿ ಸಚಿವ ಹೆಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿ ಸರ್ಕಾರಕ್ಕೆ ನೋಟಿಸ್ ನೀಡಿದ್ದ ಸುಪ್ರೀಂಕೋರ್ಟ್ ಸೂಚನೆಯಂತೆ ಮಠಕ್ಕೆ ಇದೀಗ ಸರ್ಕಾರ ಆಡಳಿತ ಸಮಿತಿ ಅಧ್ಯಕ್ಷರ ನೇಮಿಸಿದೆ. ಸದ್ಯದಲ್ಲೇ ಆಡಳಿತ ಸಮಿತಿ ಸದಸ್ಯರ ನೇಮಕ ಎಂದು ಮಾಹಿತಿ ಇದೆ.

ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು.
ವಿಚಾರಣೆ ನಡೆಸಿ ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆ ಹಿನ್ನೆಲೆ ಇಂದು ಸರ್ಕಾರ ಆಡಳಿತ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ನೇಮಕ ಮಾಡಿ ಆದೇಶ ಹೊರಡಿಸಿದೆ.

ಫೋಕ್ಸೋ ಪ್ರಕರಣದಲ್ಲಿ 14 ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಮುರುಘಾಶ್ರೀ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು. ಬಳಿಕ ಮುರುಘಾಶ್ರೀಗೆ ಮರಳಿ ಮುರುಘಾಮಠದ ಆಡಳಿತ ಕೈಗೆ ಸಿಕ್ಕಿತ್ತು.

Most Popular

To Top
error: Content is protected !!