ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ನ್ಯಾಯಾಲಯ

0

Gummata Nagari : Bangalore News

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಸೆ.19ಕ್ಕೆ ಮುಂದೂಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಾಗಿಣಿ ಅವರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಹೊಸದಾಗಿ ನೇಮಕವಾಗಿರುವ ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಅವರು (ಎಸ್‍ಪಿಪಿ) ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿರುವುದರಿಂದ ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನು ಸೆ.19ರವರೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿರುವುದರಿಂದ ರಾಗಿಣಿ ಇನ್ನೂ ಮೂರು ದಿನ ಜೈಲಿನಲ್ಲೇ ಇರಲಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.