ರಾಜ್ಯದಲ್ಲಿ ಶಾಲೆ ತೆರೆಯಬೇಡಿ, ಎಲ್ಲಕ್ಕಿಂತ ಜೀವ ಮುಖ್ಯ

0

Gummata Nagari : Bangalore News

ಬೆಂಗಳೂರು : ರಾಜ್ಯದಲ್ಲಿ ಶಾಲೆ ತೆರೆಯುವ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಶಾಲೆಗಳನ್ನು ತೆರೆಯುವ ಕುರಿತಂತೆ ಅಭಿಪ್ರಾಯಗಳನ್ನು ಸಲಹೆಗಳನ್ನು ಸಂಗ್ರಹಿಸುವ ಕುರಿತಾದ ನಿಮ್ಮ ಪತ್ರ ನನಗೆ ಬಂದಿದ್ದು. ಈಗ ಸಿದ್ದರಾಮಯ್ಯ ಅಭಿಪ್ರಾಯ ಹೀಗಿದೆ ಕೊರೋನಾ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದ ಉಳಿದೆಡೆಗಿಂತ ಕರ್ನಾಟಕದಲ್ಲಿ ಭೀಕರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಟೆಸ್ಟ್ಗಳ ಸಂಖ್ಯೆ ಹೆಚ್ಚಿಸಿದಂತೆಲ್ಲಾ ಪ್ರಕರಣಗಳ ಸಂಖ್ಯೆಯೂ ಹೆಚ್ಚು ಪತ್ತೆಯಾಗುತ್ತಿರುವುದು ಆತಂಕ ಹುಟ್ಟಿಸುತ್ತಿದೆ.

ತಜ್ಞರ ಮಾತುಗಳ ಪ್ರಕಾರ ಈ ವರ್ಷ ಜೀವ ಉಳಿಸಿಕೊಳ್ಳಬೇಕೇ ಹೊರತು ಉಳಿದೆಲ್ಲವನ್ನು ನಗಣ್ಯವೆಂದು ಭಾವಿಸಬೇಕು. ಹಿಂದೆ ವಿವಿಧ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಸಂದರ್ಭದಲ್ಲಿ ಸ್ವತ: ನಾನೇ ಬೆಂಬಲಿಸಿದ್ದೆ. ಆದರೆ, ಇಂದಿನ ಪರಿಸ್ಥಿತಿಯೆ ಬೇರೆಯಾಗಿದೆ. ಅಂಕಿ ಅಂಶಗಳನ್ನು ತಿರುಚುವ ಮೂಲಕ ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಸರ್ಕಾರದ ಬೆನ್ನನ್ನು ಜನರು ತಟ್ಟಬೇಕೇ ಹೊರತು ಸರ್ಕಾರವೇ ತಟ್ಟಿಕೊಂಡರೆ ಹಾಸ್ಯಾಸ್ಪದವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಟ್ಟಾರೆ ಈಗ ಶಾಲೆ ತೆರೆಯಲು ಅಷ್ಟು ಅನುಕೂಲಕರವಾದ ವಾತಾವರಣ ರಾಜ್ಯದಲ್ಲಿ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.