ಗ್ರಾ.ಪಂ ಚುನಾವಣೆಗೆ ಮುಹೂರ್ತ ನಿಗಧಿ

0

ಬೀದರ್‌ ಜಿಲ್ಲೆಯಲ್ಲಿ ಮಾತ್ರ ಇವಿಎಂ ಬಳಕೆ ಮಾಡಲಾಗುತ್ತಿದ್ದು, ಉಳಿದೆಡೆ ಮತಪತ್ರಗಳ ಮೂಲವೇ ಚುನಾವಣೆ ನಡೆಯಲಿವೆ.

Gummata Nagari : Bangalore News

ಬೆಂಗಳೂರು : ಅವಧಿ ಮುಗಿದಿರುವ ರಾಜ್ಯದ 5762 ಗ್ರಾಮಪಂಚಾಯತಿಗಳ ಚುನಾವಣೆ ನಡೆಸಲು ಚುನಾವಣಾ ಆಯೋಗವು ದಿನಾಂಕಗಳನ್ನು ಪ್ರಕಟಿಸಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯತಿ ಚುನಾವಣೆಯ ಮೊದಲ ಹಂತದ ಮತದಾನವು ಡಿಸೆಂಬರ್ 22 ರಂದು ನಡೆಯಲಿದ್ದು ಮತ್ತು ಎರಡನೇ ಹಂತದ ಮತದಾನವು ಡಿಸೆಂಬರ್ 27ಕ್ಕೆ ನಿಗಧಿಯಾಗಿದೆ. ಇನ್ನು ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಇಂದಿನಿಂದಲೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಮೊದಲ ಹಂತದ ನಾಮಪತ್ರ ಸಲ್ಲಿಸಲು ಡಿ.7ರಿಂದ ಮತ್ತು ಎರಡನೇ ಹಂತದ ನಾಮಪತ್ರ ಸಲ್ಲಿಸಲು ಡಿ.11ರಿಂದ ಅವಕಾಶನೀಡಲಾಗಿದ್ದು, ಡಿ.11 ಮತ್ತು ಡಿ.16 ನಾಮಪತ್ರ ಸಲ್ಲಿಸಲು ಕೊನೆಯದಿನವಾಗಿದೆ. ಡಿ.12 ಮತ್ತು 17ರಂದು ನಾಮಪತ್ರಗಳ ಪರಿಶೀಲನೆ ನಡೆಲಿದೆ. ನಾಮಪತ್ರ ವಾಪಸ್ ಪಡೆಯಲು ಕ್ರಮವಾಗಿ ಡಿ.14 ಮತ್ತು 19ರಂದು ಕೊನೆಯ ದಿನವಾಗಿವೆ.

ಸುಮಾರು 5762 ಗ್ರಾಮ ಪಂಚಾಯಿತಿಗಳ, 35884 ಕ್ಷೇತ್ರಗಳಿಂದ 92121 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬೇರು ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಈ ಚುನಾವಣೆ ಪ್ರಮುಖ‌ ಪಾತ್ರವಹಿಸಲಿದೆ. ಹಾಗಾಗಿ ಈ ಚುನಾವಣೆಯನ್ನು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಳ್ಳಲಿವೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.