ತೀರ್ಪು ದುರದೃಷ್ಟಕರ

0

Gummata Nagari : Bangalore News

ಬೆಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ.

‘ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ’ ಎಂದು 2019 ನವಂಬರ್ 9ರ ಸುಪ್ರೀಮ್ ಕೋರ್ಟ್ ತೀರ್ಪು ಹೇಳಿದೆ. ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ.

ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಬಾಬರಿ ಮಸೀದಿ ಧ್ವಂಸ ಮಾಡಿದ ಅಪರಾಧಿಗಳನ್ನು ಶಿಕ್ಷೆಗೊಳಪಡಿಸಬೇಕು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.