ಕೊರೊನಾ ಕರಿನೆರಳಿಗೆ ಕಮರಿದ ವಿದ್ಯಾಗಮ ತಾತ್ಕಾಲಿಕ ಬಂದ್ !

0

Gummata Nagari : Bangalore News

ಬೆಂಗಳೂರು : ಕೊರೊನಾ ಕರಿಛಾಯೆಗೆ ಕಮರಿದ ವಿದ್ಯಾಮಗ ಕಾರ್ಯಕ್ರಮ. ಈ ಯೋಜನೆಯಿಂದಾಗಿ ಗುರುವೃಂಧದಲ್ಲಿ ಕೊರೊನಾಂತಕ ಹೆಚ್ಚುತ್ತಿದೆ. ಕೂಡಲೇ ಇದನ್ನು ಸ್ಥಗಿತಗೊಳಿಸಿ ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕು ಎಂಬ ಒತ್ತಾಯ ದಟ್ಟವಾದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಬಗ್ಗೆ ಕೆಲ ವಲಯಗಳಲ್ಲಿ ನಾನಾ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ.

ವಿದ್ಯಾಗಮ ಸಮಾಜದ ಕೆಳಸ್ಥರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ-ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.