Gummata Nagari

Bijapur

ಬಿಜಾಪುರ: ಅರ್ಜಿ ಅಹ್ವಾನ

ಮೇ.19ರಂದು ಪ್ರವೇಶ ಪರೀಕ್ಷೆ
ಬಿಜಾಪುರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಮೇ.19ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು ಅರ್ಜಿ ಸಲ್ಲಿಸಿದ ಆಯಾ ತಾಲೂಕಿನ ವಸತಿ ಶಾಲೆಯಲ್ಲಿ ಪಡೆಯಬಹುದಾಗಿದೆ.

ಪ್ರವೇಶ ಪರೀಕ್ಷೆಗಳು ನಡೆಯುವ ಕೇಂದ್ರಗಳ ವಿಳಾಸ ಹಾಗೂ ಪ್ರಾಂಶುಪಾಲರ ಸಂಪರ್ಕ ಸಂಖ್ಯೆ:
ತಿಕೋಟಾದ ಡಾ. ಎ.ಪಿ.ಜೆಅಬ್ದುಲ್ ಕಲಾಂ ವಸತಿಶಾಲೆ, ಅರಕೇರಿ (8971459683), ಸರಕಾರಿ ಮುಸ್ಲಿಂ ವಸತಿ ಶಾಲೆ ಅಫಜಲಪುರಟಕ್ಕೆ ವಿಜಯಪುರ (8310830407) ಚಡಚಣ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಲಹಳ್ಳಿ (9620828185) ಸಿಂದಗಿಯ ಎಚ್. ಜಿ. ಪಿಯು ಕಾಲೇಜು ವಿವೇಕಾನಂದÀ ಸರ್ಕಲ್ ಸಿಂದಗಿ, ಹೆಚ್.ಟಿ. ಕುಲಕರ್ಣಿ, ಪ್ರೌಢಶಾಲೆ, ಸಿಂದಗಿ(9980952960), ಶಾಂತೇಶ್ವರ ಪಿಯು ಕಾಲೇಜು ಬಸ್‌ಸ್ಟ್ಯಾಂಡ್ ಹತ್ತಿರ ಮಿನಿವಿಧಾನಸೌಧ ಇಂಡಿ (7892371709), ಅಭ್ಯುದಯ ಆಂಗ್ಲ ಮಾಧ್ಯಮ ಶಾಲೆ ಮುದ್ದೇಬಿಹಾಳ (7259179398), ಎಂ.ಜಿ.ಎA.ಕೆ ಆಂಗ್ಲ ಮಾಧ್ಯಮ ಶಾಲೆ ಮುದ್ದೇಬಿಹಾಳ (9844493306).
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಬಿಜಾಪುರ 08352-295523, ತಾಲೂಕು ಮಾಹಿತಿ ಕೇಂದ್ರ, ವಿಜಯಪುರ 8123710766, ತಾಲೂಕು ಮಾಹಿತಿ ಕೇಂದ್ರ, ಬ.ಬಾಗೇವಾಡಿ 9972340721, ತಾಲೂಕು ಮಾಹಿತಿ ಕೇಂದ್ರ, ಮುದ್ದೇಬಿಹಾಳ 8722445552, 5 ತಾಲೂಕು ಮಾಹಿತಿ ಕೇಂದ್ರ, ಇಂಡಿ 9900109759, 6 ತಾಲೂಕು ಮಾಹಿತಿ ಕೇಂದ್ರ, ಸಿಂದಗಿ 9035558609 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಅಹ್ವಾನ
ಬಿಜಾಪುರ: ಪ್ರತಿಭಾವಂತ ಪರಿಶಿಷ್ಟ ಜಾತಿ, ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮೇ.21 ರೊಳಗೆ ಆನ್ ಲೈನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯನ್ನು ಪ್ರವೇಶ ಪರೀಕ್ಷೆ ಮೂಲಕ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರಾದ ಪುಂಡಲಿಕ್ ಮಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಿಜಾಪುರ: 2024-25 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿದೆ. ಮೇ.14 ಕೊನೆಯ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೆರಿಟ್ ಮೇಲೆ ಆಯ್ಕೆಯಾದ ಆಯ್ಕೆಯಾದ ವಿದ್ಯಾಥಿಗಳು ಪಟ್ಟಿಯನ್ನು ಮೇ.15 ರಂದು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರದರ್ಶಿಸಲಾಗುವುದು. ಮೇ.16 ಆಯ್ಕೆಯಾದ ವಿಧ್ಯಾರ್ಥಿಗಳು ಮೂಲ ದಾಖಲೆ ಹಾಗೂ ಶುಲ್ಕದೊಂದಿಗೆ ಪ್ರವೇಶಾತಿಯನ್ನು ಪಡೆಯಲು ಕೊನೆಯ ದಿನಾವಾಗಿದೆ ಎಂದು ಸರಕಾರಿ ಪಾಲಿಟೆಕ್ನಿಕ್ ಬಿಜಾಪುರದ ಪ್ರಾಚಾರ್ಯುರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Most Popular

To Top
error: Content is protected !!