Gummata Nagari

Bijapur

ಬಿಜಾಪುರ : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪವಿತ್ರಾ ಕೊಣ್ಣೂರ ಜಿಲ್ಲೆಗೆ ಪ್ರಥಮ

 

ಬಿಜಾಪುರ: ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರ ಮಡಿವಾಳಪ್ಪಗೌಡ ಕೊಣ್ಣೂರ ಅತಿ ಹೆಚ್ಚು ಅಂಕ ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಸರಕಾರಿ ಆದರ್ಶ ವಿದ್ಯಾಲಯ ಆರ್.ಎಂ.ಎಸ್.ಎ ಶಾಲೆಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿನಿ 625ಕ್ಕೆ 623 ಅಂಕ ಪಡೆದು ಗಮನ ಸೆಳೆದಿದ್ದಾಳೆ.
ಸಾಧನೆ ಮಾಡಿರುವ ವಿದ್ಯಾರ್ಥಿನಿಯನ್ನು ಶಾಲೆಯ ಶಿಕ್ಷಕರು ಸನ್ಮಾನಿಸಿ ಗೌರವಿಸಿದರು.

Most Popular

To Top
error: Content is protected !!