ವಾಣಿಜ್ಯನಗರಿಯಲ್ಲಿ ಬೆಳ್ಳಂಬೆಳಿಗ್ಗೆ ಹರಿದ ನೆತ್ತರು

0

Gummata Nagari : Dharwad News

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.

ಗದಗ ನಗರದ ಕಾನೂನು ಕಾಲೇಜಿನ ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನಿಂದಲೇ ಮಾವನ ಕೊಲೆಯಾಗಿದೆ ಎಂಬ ಶಂಕೆ‌ ವ್ಯಕ್ತವಾಗುತ್ತಿದೆ. ಆದ್ರೆ ಕೊಲೆಯ ನೈಜ ಕಾರಣ ಪೊಲೀಸ್ ತನಿಖೆಯ ಮೂಲಕವೇ ತಿಳಿದು ಬರಲಿದೆ.

ಇತ್ತೀಚೆಗೆ ನಿವೃತ್ತಿ ಪಡೆದಿದ್ದ ಶಂಕ್ರಪ್ಪ ಮುಶನ್ನವರ ಅವರು ಹುಬ್ಬಳ್ಳಿಯಲ್ಲಿ ವಾಸವಾಗಿದ್ದರು.

ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶವವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ವಿದ್ಯಾನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.