Gummata Nagari

Bijapur

ಮಸ್ಟರಿಂಗ ಕೇಂದ್ರಗಳಿಗೆ ಡಿಸಿ ಜಾನಕಿ ಭೇಟಿ ಪರಿಶೀಲನೆ

 

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಚುನಾವಣೆಗೆ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಬಾದಾಮಿ ಮತ್ತು ಹುನಗುಂದ ವಿಧಾನಸಭಾ ಮತಕ್ಷೇತ್ರಗಳಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಪರಿಶೀಲಿಸಿದರು.
ಸೋಮವಾರ ಬಾದಾಮಿ ವೀರಪುಲಕೇಶಿ ವಿದ್ಯಾವರ್ಧಕ ಸಂಸ್ಥೆ ಮತ್ತು ಹುನಗುಂದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಸ್ಥೆಯಲ್ಲಿ ಸ್ಥಾಪಿಸಲಾದ ಮಸ್ಟರಿಂಗ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಸ್ಟರಿಂಗ್ ಕಾರ್ಯದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು ಸಿದ್ದತೆಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ, ಚುನಾವಣಾ ಸಾಮಗ್ರಿ, ಸಿದ್ದತಾ ಕೊಠಡಿಗಳಿಗೆ ತೆರಳಿ ಚುನಾವಣಾ ಆಯೋಗದ ಮಾರ್ಗಸೂಚಿ ಪಾಲಿಸಿಕೊಂಡು ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ  ತಿಳಿಸಿದರು.

ನರಗುoದ 220 ಮತಗಟ್ಟೆ ಸೇರಿದಂತೆ ಒಟ್ಟು 1946 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮುಧೋಳ ಮೀಸಲು ಕ್ಷೇತ್ರದಲ್ಲಿ 212, ತೇರದಾಳದಲ್ಲಿ 236, ಜಮಖಂಡಿ 232, ಬೀಳಗಿ 260, ಬಾದಾಮಿ 260, ಬಾಗಲಕೋಟೆ 267 ಹಾಗೂ ಹುನಗುಂದ ಕ್ಷೇತ್ರದಲ್ಲಿ 255 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕಾಯ್ದಿರಿಸಿದ ಸಿಬ್ಬಂದಿಯೂ ಒಳಗೊಂಡAತೆ ಒಟ್ಟು 9274 ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಸಿಬ್ಬಂದಿಗಳು ಆಯಾ ಮತಗಟ್ಟೆಗಳಿಗೆ ತೆರಳಲು 219 ಬಸ್, 60 ಮಿನಿ ಬಸ್ಸುಗಳು, 92 ಕ್ರೂಸರ್, 12 ಟೆಂಪೋ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಹೊತ್ತಿಗೆ ಮತಗಟ್ಟೆಗಳಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಲೋಕಸಭಾ ಮತಕ್ಷೇತ್ರದಲ್ಲಿ ಉಳಿದ ಮಸ್ಟರಿಂಗ ಕೇಂದ್ರಗಳಾದ ಮುಧೋಳ ಆರ್.ಎಂ.ಜಿ ಪಿಯು ಕಾಲೇಜ, ಬನಹಟ್ಟಿ ತಮ್ಮಣ್ಣಪ್ಪ ಚಿಕ್ಕೋಡಿ ಕಲಾ ಹಾಗೂ ವಾಣಿಜ್ಯ ಕಾಲೇಜ, ಜಮಖಂಡಿ ಸರಕಾರಿ ಪಿ.ಬಿ ಪದವಿ ಪೂರ್ವ ಕಾಲೇಜ (ಪ್ರೌಢಶಾಲಾ ವಿಭಾಗ), ಬೀಳಗಿ ಸಿದ್ದೇಶ್ವರ ಕಾಂಪೋಜಿಟ್ ಪಿಯು ಕಾಲೇಜ, ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜ, ಹಾಗೂ ಗದಗ ಜಿಲ್ಲೆಯ ನರಗುಂದದ ಸರಕಾರಿ ಇಂಜಿನೀಯರಿAಗ್ ಕಾಲೇಜನಲ್ಲಿ ಮಸ್ಟರಿಂಗ್ ಕಾರ್ಯ ನಡೆಸಲಾಯಿತು. ಮತಗಟ್ಟೆ ಸಿಬ್ಬಂದಿಗಳಿಗೆ ನೀಡಲಾಗುತ್ತಿರುವ ಊಟದ ವಿಭಾಗಕ್ಕೆ ತೆರಳಿ ಪರಿಶೀಲಿಸಿದರು.
ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿ ಮತ್ತು ಸರಕಾರಿ ಪಿ.ಬಿ ಪದವಿ ಪೂರ್ವ ಕಾಲೇಜನಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಜಿ.ಪಂ ಸಿಇಓ ಶಶೀಧರ ಕುರೇರ ಮತದಾನಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳ ವಿತರಣೆ ಕಾರ್ಯವನ್ನು ವೀಕ್ಷಣೆ ಮಾಡಿದರು. ವೈದ್ಯಕೀಯ ತಮಗೆ ನೀಡಲಾದ ಸಾಮಗ್ರಿಗಳನ್ನು ಚೆಕ್‌ಲಿಸ್ಟ ಪ್ರಕಾರ ಪರೀಕ್ಷಿಸಿಕೊಂಡು ಮತಗಟ್ಟೆಗೆ ತೆರಳಲು ತಿಳಿಸಿದರು. ವೈದ್ಯಕೀಯ ಸೌಲಭ್ಯ ಒದಗಿಸಿದ್ದು, ಅದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಇದೇ ಮಸ್ಟರಿಂಗ ಕೇಂದ್ರಕ್ಕೆ ಪೊಲೀಸ್ ವೀಕ್ಷಕರಾದ ಎಂ.ಆರ್ಶಿ ಅವರ ಜೊತೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಸ್ಟರಿಂಗ್ ಕಾರ್ಯ ಪರಿಶೀಲಿಸಿದರು.

 

Most Popular

To Top
error: Content is protected !!