ಪ್ರವಾಹ ಕೊಚ್ಚಿಹೋದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ

0

Gummata Nagari

ಧಾರವಾಡ: ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಕೊಚ್ಚಿಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ ಅವರ ಕುಟುಂಬಗಳಿಗೆ ಇಂದು ತಲಾ 5 ಲಕ್ಷ ರೂ.ಪರಿಹಾರ ನೀಡಲಾಯಿತು.

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಇವರಿಗೆ ತಲಾ 5 ಲಕ್ಷ ರೂ. ಗಳ ಪರಿಹಾರ ಧನದ ಚೆಕ್ ನೀಡಿ, ಬೆಣ್ಣೆಹಳ್ಳ ವೀಕ್ಷಿಸಿದರು. ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ, ಅಣ್ಣಿಗೇರಿ ತಹಶೀಲ್ದಾರ ಕೊಟ್ರೇಶ, ನವಲಗುಂದ ತಹಶೀಲ್ದಾರ ನವೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.