ಧಾರವಾಡ : ಧಾರವಾಡದ ಕಲ್ಯಾಣನಗರದ ಚೆಂಬೆಳಕಿನ ಕವಿ ಡಾ.ಚೆನ್ನವೀರ ಕಣವಿ ಅವರು ಇದೀಗ ಎರಡನೇ ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ.
ಈಗಾಗಲೇ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದುಕೊಂಡಿರುವ ಕಣವಿ ಅವರನ್ನು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಮತ್ತೊಂದು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.
ಜಾನಪದ ವಿದ್ವಾಂಸ ಎಂ.ಜಿ.ಬಿರಾದಾರ, ಕನ್ನಡ ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಪರಿಸರವಾದಿ ಸಾಲುಮರದ ತಿಮ್ಮಕ್ಕ, ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಜೊತೆಗೆ ಧಾರವಾಡದ ಹಿರಿಯ ಕವಿ ಚೆನ್ನವೀರ ಕಣವಿ ಅವರನ್ನೂ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.
ಕಲಬುರ್ಗಿಯ ಸಿಯುಕೆಯು ವಿವಿಧೋದ್ದೇಶ ಸಭಾಭವನದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ 5 ನೇ ಘಟಿಕೋತ್ಸವ ಕಾರ್ಯಕ್ರಮ ಅಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube । Instagram ಅನುಸರಿಸಿ..