ಮಾಸ್ಕ್ ಹಾಕದವರಿಗೆ ನಾಳೆಯಿಂದ ಬಿಳುತ್ತೆ ಮತ್ತೆ ದಂಡ!

0

Gummata Nagari : Dharwad News

ಧಾರವಾಡ : ಕೊರೊನಾ ವೈರಸ್ ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ನಿಯಮ ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಮಾಸ್ಕ್ ಬಳಕೆ ಮಾಡದವರಿಂದ ಜಿಲ್ಲೆಯಲ್ಲಿ ಈಗಾಗಲೇ 30 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

ದಂಡ ವಿಧಿಸುವ ಕಾರ್ಯ ಇನ್ನಷ್ಟು ಚುರುಕುಗೊಳಿಸಲು ನಾಳೆ ಸೆ.25 ರಿಂದ ಜಿಲ್ಲೆಯ ನಗರ,ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಪ್ರಾರಂಭಿಸಲಾಗುವುದು.ಪ್ರತಿಯೊಬ್ಬ ನಾಗರಿಕರು ಮಾಸ್ಕ್ ಬಳಕೆ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾಸ್ಕ್ ಬಳಕೆಯಿಂದ ಕೊರೊನಾ ವೈರಾಣು ಹರಡುವಿಕೆ ನಿಯಂತ್ರಿಸಬಹುದು ಎಂಬುದು ಈಗಾಗಲೇ ವೈದ್ಯಕೀಯವಾಗಿ ದೃಢಪಟ್ಟಿದೆ.

ಮಾರುಕಟ್ಟೆ, ಹೋಟೆಲ್ , ಪಾನ್ ಶಾಪ್ ಮತ್ತಿತರ ಅಂಗಡಿ- ಮುಂಗಟ್ಟು ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡುವುದು ಕಡ್ಡಾಯವಾಗಿದೆ.

ಈ ನಿಯಮ ಉಲ್ಲಂಘಿಸಿದರೆ ನಗರ ಪ್ರದೇಶಗಳಲ್ಲಿ 200 ರೂ.ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರೂ.ದಂಡ ವಿಧಿಸಲು ಸರ್ಕಾರ ಸೂಚಿಸಿದೆ. ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ದಂಡ ವಿಧಿಸಲು ಪೊಲೀಸ್, ಮಹಾನಗರಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಕಂದಾಯ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡಗಳು ಹುಬ್ಬಳ್ಳಿ- ಧಾರವಾಡ ಅವಳಿನಗರ, ಎಲ್ಲಾ ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ಆಕರಿಸಲಿವೆ.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂಬುದು ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.