ಹುಬ್ಬಳ್ಳಿ – ಸೋಲಾಪುರ 4 ವೆಗೆ ಗ್ರೀನ್ ಸಿಗ್ನಲ್

ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ

0

ಬಹುನಿರೀಕ್ಷಿತ ಯೋಜನೆಯಲ್ಲಿ ಒಂದಾಗಿರುವ ಹುಬ್ಬಳ್ಳಿ-ಸೊಲ್ಲಾಪರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವನೆಗೆ

ಹುಬ್ಬಳಿ : ಧಾರವಾಡ ಜಿಲ್ಲೆಯ ಬಹುನಿರೀಕ್ಷಿತ ಯೋಜನೆಯಲ್ಲಿ ಒಂದಾಗಿರುವ ಹುಬ್ಬಳ್ಳಿ-ಸೊಲ್ಲಾಪರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವನೆಗೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಾತ್ಪಿಕ ಒಪ್ಪಿಗೆ ನೀಡಿದ್ದಾರೆ.

ಈ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿದೆ. ಈ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಿದರೆ ಸುಗಮ ಸಂಚಾರ ಹಾಗೂ ಅಂತರ್ ರಾಜ್ಯ ಸಂಪರ್ಕಕ್ಕೆ ಅನುಕೂಲವಾಗುತ್ತದೆ ಎಂಬ ವಾದವನ್ನು ಗಡ್ಕರಿ ಒಪ್ಪಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ, “ಹುಬ್ಬಳಿ- ಸೊಲ್ಲಾಪರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿದೆ. ಈ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಿದರೆ ಸುಗಮ ಸಂಚಾರ ಹಾಗೂ ಅಂತರ್ ರಾಜ್ಯ ಸಂಪರ್ಕಕ್ಕೆ ಅನುಕೂಲವಾಗುತ್ತದೆ.

ಈ ಮಾರ್ಗವು ಪ್ರಮುಖ ಮಾರ್ಗವಾಗಿದ್ದು, ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವ ಪ್ರಾಮುಖ್ಯತೆಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿ, ಈ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ,” ಎಂಬುದಾಗಿ ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಇದಕ್ಕೂ ಮೊದಲು ನಗರದ ಹಳೇ ಏರ್‌ಪೋರ್ಟ್ ರಸ್ತೆಯಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ರಾಷ್ತ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.