ನೀರಾವರಿ ನಿಗಮ ಕಚೇರಿ ಧಾರವಾಡದಲ್ಲಿಯೇ ಮುಂದುವರಿಸಿ

ರಾಜ್ಯ ಸರ್ಕಾರಕ್ಕೆ ಮಾಜಿ ಶಾಸಕ ಎನ್.ಹೆಚ್. ಕೋನರಡ್ಡಿ ಆಗ್ರಹ

0

Gummata Nagari : Dharwad News

ಧಾರವಾಡ : ರಾಜ್ಯದಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂಬ ಕೂಗು ಮುಂದುವರೆದುಕೊಂಡು ಬಂದಿದೆ. ಅಸಮತೋಲನ ನಿವಾರಣೆಗೆ ಡಾ: ಡಿ.ಎಮ್. ನಂಜುಂಡಪ್ಪ ವರದಿ ಅನ್ವಯ ರಾಜ್ಯ ಮಟ್ಟದ ಕೆಲವು ಕಚೇರಿಗಳನ್ನು ಸ್ಥಳಾಂತರಿಸಲು ವರದಿ ನೀಡಿದ ಪ್ರಕಾರ ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಕಚೇರಿಯನ್ನು ಧಾರವಾಡ ವಾಲ್ಮಿ ಕಟ್ಟಡದಲ್ಲಿ ಪ್ರಾರಂಭಿಸಲಾಯಿತು. ಧಾರವಾಡಕ್ಕೆ ಐಐಟಿ ಬಂದ ನಂತರ ವಾಲ್ಮಿ ಕಟ್ಟಡ ಅವರಿಗೆ ನೀಡಿ ಅಲ್ಲಿ ಕಾರ್ಯಾರಂಭಮಾಡಿದೆ. ಧಾರವಾಡದಲ್ಲಿ ನಿಗಮಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಬೇಕಿತ್ತು. ಅದು ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಗೊಳ್ಳದೇ ಬೆಂಗಳೂರಿನ ಅರ್ಧ ಕಚೇರಿಯನ್ನು ಅಧಿಕಾರಿಗಳ ಸ್ವಹಿತಕ್ಕಾಗಿ ಕಾಫಿ ಬೋರ್ಡನಲ್ಲಿ ಮುಂದುವರೆಸಿದ್ದಾರೆ. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಧಾರವಾಡದಲ್ಲಿ ಇದ್ದ ಕರ್ನಾಟಕ ನೀರಾವರಿ ನಿಗಮದ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಮುಂದುವರೆಸಲು ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.

ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಇದ್ದ ಅವಧಿಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ ಉತ್ತರ ಕರ್ನಾಟಕದಲ್ಲಿ ಇತಿಹಾಸ ನಿರ್ಮಿಸಿದರು. ಉತ್ತರ ಕರ್ನಾಟಕಕ್ಕೆ 9 ಕಚೇರಿಗಳನ್ನು ಸ್ಥಳಾಂತರಿಸಲು ಆದೇಶ ಕೂಡ ಹೊರಡಿಸಿದರು. ಆದರೆ ಈಗಿನ ಸರ್ಕಾರ ಅದನ್ನು ಜಾರಿ ಮಾಡುತ್ತಿಲ್ಲ. ಅಲ್ಲದೇ ಕುಮಾರಸ್ವಾಮಿ ಅವರ ಅವಧಿಯಲ್ಲಿ ಹುಬ್ಬಳ್ಳಿಗೆ ಕಾನೂನು ವಿಶ್ವವಿದ್ಯಾಲಯ ಸ್ಥಾಪನೆ, ಹುಬ್ಬಳ್ಳಿ ಡಿಜಿಟಲ್ ಲೈಬ್ರರಿ, ಧಾರವಾಡ ಹಾಗೂ ಗುಲಬರ್ಗಾದಲ್ಲಿ ನೂತನ ಹೈಕೋರ್ಟ್ ಕಟ್ಟಡಕ್ಕೆ ಚಾಲನೆ, ಮಹಾದಾಯಿ ಕಳಸಾ-ಬಂಡೂರಿ ಯೋಜನೆ ಚಾಲನೆ, 1000 ಕ್ಕೂ ಹೆಚ್ಚು ಸರ್ಕಾರಿ ಪ್ರೌಢಶಾಲೆ, 500ಕ್ಕೂ ಹೆಚ್ಚು ಸರ್ಕಾರಿ ಪದವಿಪೂರ್ವ ಕಾಲೇಜ, 170ಕ್ಕೂ ಹೆಚ್ಚು ನೂತನ ಸರ್ಕಾರಿ ಡಿಗ್ರಿ ಕಾಲೇಜು, ಹಾಸ್ಟೇಲ್, ಪ್ರಾಥಮಿಕ ಆರೋಗ್ಯ ಕೇಂದ್ರ, ಸಕಾರಿ ಆಸ್ಪತ್ರೆಗಳ ನೂತನ ಕಟ್ಟಡ ಹೀಗೆ ಮೂಲಭೂತ ಸೌಕರ್ಯಕ್ಕಾಗಿ ಅನುದಾನ ಒದಗಿಸಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ನಂತರ ಮತ್ತೇ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ರೈತರ ಸಾಲಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಈ ರೀತಿಯಾಗಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದಾಗ ಉತ್ತರ ಕರ್ನಾಟಕ್ಕೆ ಅನ್ಯಾಯಮಾಡದೇ ಡಾ: ನಂಜುಂಡಪ್ಪ ವರದಿಯಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಈಗ ಮತ್ತೇ ಕರ್ನಾಟಕ ನೀರಾವರಿ ನಿಗಮವನ್ನು ಸ್ಥಳಾಂತರಿಸದೇ ಧಾರವಾಡದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಸರ್ಕಾರ ನಿರ್ಣಯ ತೆಗೆದುಕೊಳ್ಳಬೇಕೆಂದು ನವಲಗುಂದ ಮಾಜಿ ಶಾಸಕ ಎನ್.ಹೆಚ್. ಕೋನರಡ್ಡಿ ಅವರು ಧಾರವಾಡ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.