ಸತೀಶ್ ಜಾರಕಿಹೊಳಿ ಇಂದ ವಿದ್ಯಾರ್ಥಿಗಳ ಭೇಟಿ

ಲ್ಯಾಪಟಾಪ್, ಶಿಷ್ಯವೇತನ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಜಾರಕಿಹೊಳಿ ಬೆಂಬಲ

0

ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿದ ಜಾರಕಿಹೊಳಿ, ಕವಿವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು. ಅಲ್ಲದೇ ಕುಲಪತಿ ಪ್ರೊ.ಎಂ.ವಿಶ್ವನಾಥ ಅವರೊಂದಿಗೂ ಚರ್ಚೆ ಮಾಡಿ, ಕೂಡಲೇ ವಿದ್ಯಾರ್ಥಿಗಳಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಮನವಿ

ಧಾರವಾಡ: ಲ್ಯಾಪಟಾಪ್ ಹಾಗೂ ಶಿಷ್ಯವೇತನ ನೀಡುವಂತೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸ್ನಾತಕೋತ್ತರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಬೆಂಬಲ ಸೂಚಿಸಿದ್ದಾರೆ.

ವಿದ್ಯಾರ್ಥಿಗಳು ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿದ ಜಾರಕಿಹೊಳಿ, ಕವಿವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು. ಅಲ್ಲದೇ ಕುಲಪತಿ ಪ್ರೊ.ಎಂ.ವಿಶ್ವನಾಥ ಅವರೊಂದಿಗೂ ಚರ್ಚೆ ಮಾಡಿ, ಕೂಡಲೇ ವಿದ್ಯಾರ್ಥಿಗಳಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಮನವಿ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ ಜಾರಕಿಹೊಳಿ, ಯಾವುದೇ ಸರ್ಕಾರಗಳಿದ್ದರೂ ಪ್ರತಿಭಟನೆ ಮಾಡಿಯೇ ಹಕ್ಕು ಪಡೆಯವ ಪದ್ಧತಿ ಮೊದಲಿನಿಂದಲೂ ಬಂದಿದೆ. ವಿದ್ಯಾರ್ಥಿಗಳು ಲ್ಯಾಪಟಾಪ್ ಹಾಗೂ ಶಿಷ್ಯವೇತನ ಸಂಬಂಧ ಪ್ರತಿಭಟನೆ ನಡೆಸುತ್ತಿದ್ದು, ಕುಲಪತಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಈ ಬಗ್ಗೆ ಉನ್ನತಮಟ್ಟದ ಅಧಿಕಾರಿಗಳೊಂದಿಗೂ ಮಾತನಾಡಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಪ್ರಯತ್ನ ಮಾಡುತ್ತೇವೆ ಎಂದರು

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.