ಕ್ರಮಕ್ಕೆ ಶಾಸಕ ಬೆಲ್ಲದ ಒತ್ತಾಯ

ಮೇಲ್ಸೆತುವೆ ಕುಸಿತ ಪ್ರಕರಣ

0

Gummata Nagari : Dharwad News

ಧಾರವಾಡ : ಹುಬ್ಬಳ್ಳಿ-ಧಾರವಾಡ ಮಧ್ಯೆದ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಬಿಆರ್‌ಎಟಿಎಸ್ ಸಂಸ್ಥೆಯವರು ಅವಳಿನಗರದಲ್ಲಿ ಕೈಕೊಂಡ ಬಹುತೇಕ ಎಲ್ಲ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಸಮೀಪದ ನವಲೂರ ಬಳಿ ನಿರ್ಮಿಸಿರುವ ಮೇಲು ಸೇತುವೆಯ ತಡೆಗೋಡೆಯ ಕಾಂಕ್ರೀಟ ಪ್ಯಾನೆಲ್‌ಗಳು ಕಳಚಿ ಬೀಳುತ್ತಿವೆ. ಇದರಿಂದ ಅವಳಿ ನಗರದ ಮಧ್ಯೆ ಸಂಚರಿಸುವ ಜನರು ಆತಂಕದಲ್ಲಿದ್ದಾರೆ. ಈ ಕುರಿತು ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ.

ಈಗಾಗಲೇ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ನಡೆದ ಸಭೆಯಲ್ಲಿ ತಿಳಿಸಿದರೂ ಯಾವುದೇ ಕ್ರಮ ಜರುಗಿಸದಿರುವುದು ವಿಷಾದನೀಯ. ಮೇಲು ಸೇತುವೆಯ ಕಳಪೆ ಕಾಮಗಾರಿಯ ಕುರಿತು ತನಿಖೆ ನಡೆಸುವ ಅಗತ್ಯವಿದೆ. ತಪ್ಪಿತಸ್ಥ ಅಧಿಕಾರಿಗಳು ಇಂಜನೀಯರಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಮತ್ತು ಸೇತುವೆ ದುರಸ್ತಿ ಕಾರ್ಯವನ್ನು ತ್ವರಿತವಾಗಿ ನಡೆಸಿ ಅನುಕೂಲ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.