ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0

Gummata Nagari : Dharwad News

ಧಾರವಾಡ : ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡದ ಜಿಲ್ಲಾ ನ್ಯಾಯಾಲಯ ಡಿ.4ಕ್ಕೆ ಮುಂದೂಡಿದೆ.

ಈ ಹಿಂದೆ ವಿನಯ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿ ವಾಪಸ್ ಪಡೆದಿದ್ದರು. ಮತ್ತೆ ನಿನ್ನೆಯಷ್ಟೇ ಜಾಮೀನು ಕೋರಿ ವಕೀಲರು ಅರ್ಜಿ ಸಲ್ಲಿಸಿದ್ದರು. ಇಂದು ಅದರ ವಿಚಾರಣೆ ನಡೆಸಿದ ನ್ಯಾಯಾಲಯ, ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಹೇಳಿ ವಿನಯ್ ಪರ ವಕೀಲರ ಜಾಮೀನು ಅರ್ಜಿಯನ್ನು ಡಿ.4ಕ್ಕೆ ಮುಂದೂಡಿದೆ.

ಡಿ.7ರವರೆಗೆ ವಿನಯ್ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಅದರ ಮುನ್ನಾ ದಿನ ಅಂದರೆ, ಡಿ.4ಕ್ಕೆ ವಿನಯ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.