ಅವಳಿ ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಬೆಟ್ಟಿಂಗ್ ದಂಧೆ!

0
ಹುಬ್ಬಳ್ಳಿ: ಐಪಿಎಲ್ ಹೆಸರಿನಲ್ಲಿ ನಡೆಯುತ್ತಿದೆ ಭಯಾನಕ ಬೆಟ್ಟಿಂಗ್ ದಂಧೆ. ಯುವಕರನ್ನೇ ಟಾರ್ಗೆಟ್ ಮಾಡುವ ಬುಕ್ಕಿಗಳು ಜೂಜಾಟದತ್ತ ಕೊಂಡೊಯ್ಯುತ್ತಿದ್ದಾರೆ. ಅವಳಿ ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಬೆಟ್ಟಿಂಗ್ ದಂಧೆಗೆ ಮಾತ್ರ ಕಡಿವಾಣ ಇಲ್ಲದಂತಾಗಿದೆ.
ಯುವಕರು ಹೊಸ ಟ್ರೆಂಡ್ ಹೆಸರಿನಲ್ಲಿ ಕೈ ಸುಟ್ಟುಕೊಳ್ಳುವ ಪರಿಸ್ಥಿತಿಗೆ ಬರುತ್ತಿದ್ದಾರೆ. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಯುವಕರು ಸಕ್ರಿಯರಾಗುತ್ತಿದ್ದು, ಧಾರವಾಡ ಜಿಲ್ಲೆ ಸೇರಿದಂತೆ ಅವಳಿ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಎಗ್ಗಿಲ್ಲದೆ ಸಾಗಿದೆ. ಇನ್ನೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಹಾಗೂ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ನಿರ್ಧಾರ ಕೈಗೊಂಡಿದೆ. ಇನ್ನೂ ಈಗಾಗಲೇ ಹುಬ್ಬಳ್ಳಿ ಶಹರ ಉಪನಗರ ಹಾಗೂ ಧಾರವಾಡ ಶಹರ ಹಾಗೂ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ, ಬೆನ್ನಲ್ಲೇ ಖಾಕಿ ಪಡೆ ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ಕುಳಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಇನ್ನು ಹುಬ್ಬಳ್ಳಿಯ ಬಹುತೇಕ ಕಡೆಗಳಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಯುವಕರು ಲಕ್ಷ ಲಕ್ಷ ಹಣವನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವುದು ಕಾನೂನುಬಾಹಿರ ಎಂದು ಗೊತ್ತಿದ್ದರೂ ಕೂಡ ಯುವಕರು ಬೆಟ್ಟಿಂಗ್ ದಂಧೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿಯಾಗಿದೆ. ಇನ್ನು ಪಾಲಕರು ಕೂಡ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ.
ಒಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷ್ನರೇಟ್ ಬೆಟ್ಟಿಂಗ್ ಹಾವಳಿ ತಗ್ಗಿಸಲು ಹದ್ದಿನಕಣ್ಣು ಇಟ್ಟಿದೆ. ಬೆಟ್ಟಿಂಗ್ ಕಿಂಗ್ ಪಿನ್ ಗಳಿಗೆ ಕೋಳ ತೊಡಿಸಲು ಸನ್ನದ್ಧವಾಗಿದ್ದು, ಆದಷ್ಟು ಬೇಗ ಯುವಕರನ್ನು ಬೆಟ್ಟಿಂಗ್ ದಂದೆಯಿಂದ ದೂರ ಮಾಡಬೇಕು ಎಂದಿದ್ದಾರೆ.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.