ಸಂಗೊಳ್ಳಿ ರಾಯಣ್ಣ ನಿರ್ಮಾಪಕನ ಆಸ್ತಿ ಮುಟ್ಟುಗೋಲು

ವಂಚನೆ ಆರೋಪ: ನಿರ್ಮಾಪಕ ಆನಂದ್ ಅಪ್ಪುಗೋಳ ಆಸ್ತಿ ಇಡಿ ವಶಕ್ಕೆ

0

ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಹೆಸರಿನಲ್ಲಿ ಸಾವಿರಾರು ಮಂದಿಗೆ ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಸಾರ್ವಜನಿಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಅವರಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿದೆ.

Gummata Nagari : ಗುಮ್ಮಟ ನಗರಿ ಸುದ್ದಿ ತಾಣ

ಬೆಂಗಳೂರು : ಸಾರ್ವಜನಿಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಅವರಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿದೆ. ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಹೆಸರಿನಲ್ಲಿ ಸಾವಿರಾರು ಮಂದಿಗೆ ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.

ಕಾಳಧನ ಸಕ್ರಮ ಕಾಯ್ದೆಯಡಿ ಆನಂದ ಅಪ್ಪುಗೋಳ ಅವರಿಗೆ ಸೇರಿದ 31.35 ಕೋಟಿ ರೂಗಳ ಆಸ್ತಿ ಪಾಸ್ತಿಯನ್ನು ಜಪ್ತು ಮಾಡಿರುವುದಾಗಿ ಜಾರಿ ನಿರ್ದೇಶನಾಲಯದ ಪ್ರಕಟಣೆ ತಿಳಿಸಿದೆ. ಬೆಳಗಾವಿಯ ಸಂಗೊಳ್ಳಿರಾಯಣ್ಣ ಸಹಕಾರ ಸೊಸೈಟಿ ಅಧ್ಯಕ್ಷರಾಗಿರುವ ಆನಂದ ಅಪ್ಪುಗೋಳ ಠೇವಣಿದಾರರಿಗೆ ಸುಮಾರು 250 ಕೋಟಿ ರು. ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.

ಆನಂದ್ ಅಪ್ಪುಗೋಳ ಅವರಿಗೆ ಸೇರಿದ ಬಂಗಲೆಗಳು ಮತ್ತು ಇತರ ಆಸ್ತಿಗಳನ್ನು ಹರಾಜು ಹಾಕುವಂತೆ ಕೋರಿ ಸ್ಥಳೀಯ ಆಡಳಿತವು ಕಳೆದ ಜೂನ್ ತಿಂಗಳಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಆಸ್ತಿ ಹರಾಜಿನಲ್ಲಿ ಬಂದ ಹಣವನ್ನು ಠೇವಣಿದಾರರಿಗೆ ಹಂಚುವುದು ಜಿಲ್ಲಾಡಳಿತದ ಲೆಕ್ಕಾಚಾರವಾಗಿತ್ತು ಎನ್ನಲಾಗಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.