Gummata Nagari

Bijapur

ನಿರುದ್ಯೋಗಿಗಳಿಗೆ ಇಲ್ಲಿದೆ ಉದ್ಯೋಗದ ಅವಕಾಶ

ಬರ ಪೀಡಿತ ಪ್ರದೇಶಕ್ಕೆ ಸಹಾಯವಾಣಿ ಕೇಂದ್ರ ಆರಂಭ

ಯಾದಗಿರಿ: 2023-24ನೇ ಸಾಲಿನ ಯಾದಗಿರಿ ತಾಲೂಕು ವ್ಯಾಪ್ತಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಯಾದಗಿರಿ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆಯಾಗಿರುತ್ತದೆ.

ಯಾದಗಿರಿ ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆಯಾದಲ್ಲಿ ತಕ್ಷಣ ಜನರ ಸ್ಪಂದನ ಹಾಗೂ ಪರಿಹಾರಕ್ಕಾಗಿ ತಹಸೀಲ್ ಕಛೇರಿ ಯಾದಗಿರಿಯಲ್ಲಿ ಸಹಾಯವಾಣಿ ಕೇಂದ್ರವನ್ನು 2024ರ ಮಾರ್ಚ್ 6 ರಿಂದ ಪ್ರಾರಂಭಿಸಲಾಗಿದೆ. ಈ ಕಛೇರಿಯ ದೂರವಾಣಿ ಸಂಖ್ಯೆ 08473 253611ಗೆ ಕರೆ ಮಾಡಲು ಯಾದಗಿರಿ ತಾಲೂಕಿನ ಸಾರ್ವಜನಿಕರಿಗೆ ಗಮನಕ್ಕೆ ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಮತ್ಸ್ಯ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ

ಯಾದಗಿರಿ: ಯಾದಗಿರಿ ಜಿಲ್ಲೆಯ ಮೀನುಗಾರರು, ಪ್ರಧಾನಮಂತ್ರಿ ಸಂಪದ ಯೋಜನೆಯಡಿ ಸ್ಥಳೀಯವಾಗಿ ಮೀನು ಸೇವೆಯನ್ನು ಪ್ರೋತ್ಸಾಹಿಸಲು ಪರಿಸರ ಸ್ನೇಹಿ ಸುಸಜ್ಜಿತ ಕಿಯೋಸ್ಕ್ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮೀನುಗಾರಿಕೆ ಉಪ ನಿರ್ದೇಶಕರು ಶರಣಬಸಪ್ಪ ಅವರು ತಿಳಿಸಿದ್ದಾರೆ.

ಮೀನುಕೃಷಿಕರು ಮತ್ತು ಸಾರ್ವಜನಿಕರಿಗೆ ಗಮನಕ್ಕೆ ಯಾದಗಿರಿ ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ಥಳೀಯವಾಗಿ ಮೀನು ಸೇವೆಯನ್ನು ಪ್ರೋತ್ಸಾಹಿಸಲು ಪರಿಸರ ಸ್ನೇಹಿ ಸುಸಜ್ಜಿತ ಕೀಯೋಸ್ಕ್ ಅಳವಡಿಸಲಾದ ಇ-ತ್ರಿಚಕ್ರ ವಾಹನಗಳಲ್ಲಿ ತಾಜಾ ಮೀನು ಮತ್ತು ಮೀನಿನ ಉತ್ಪನ್ನಗಳ ಮಾರಾಟಕ್ಕಾಗಿ ಸಂಪದ ವಾಹಿನಿ ಯೋಜನೆಯಡಿ ಅನುಮೋದಿತ ಟೆಂಡರ್ (ಆರ್‌ಎಫ್‌ಪಿ) ಅನ್ವಯ ಅನುಷ್ಠಾನ ಮಾಡಲು ಯಾದಗಿರಿ ಜಿಲ್ಲೆಗೆ 3 ಮತ್ಸ್ಯ ಸಂಪದ ಭೌತಿಕ ಗುರಿಗಳನ್ನು ನಿಗದಿಪಡಿಸಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಮಂಗಳೂರು ಇವರ ಮುಖಾಂತರ ಪರವಾನಿಗೆ ಆಧಾರದ ಮೇಲೆ ಮಾಸಿಕ 3000 ರೂ.ಗಳ ಬಾಡಿಗೆ ಪಾವತಿಸುವ ಷರತ್ತಿನೊಂದಿಗೆ ಪರವಾನಿಗೆ ಆಧಾರದ ಮೇಲೆ ಅನುಷ್ಠಾನ ಮಾಡಲು ಆದೇಶಿಸಿರುವುದರಿಂದ, ಅರ್ಹ, ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿ ಪಾವತಿಸಬೇಕಾಗುತ್ತದೆ. (ಸಾಮಾನ್ಯ 1 ಲಕ್ಷ ರೂ.ಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆಯ 50 ಸಾವಿರ ರೂ.ಗಳ 2024ರ ಮಾರ್ಚ್ 25ರ ಒಳಗೆಸಲ್ಲಿಸಬೇಕು, ಅರ್ಹ, ಆಸಕ್ತ ಫಲಾನುಭವಿಗಳು ಸಂಬAಧಪಟ್ಟ ದಾಖಲೆಗಳೊಂದಿಗೆ ಮೀನುಗಾರಿಕೆ ಇಲಾಖೆಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ, ಮೀನುಗಾರಿಕೆ ಉಪ ನಿರ್ದೇಶಕರ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ

ಯಾದಗಿರಿ : 2023-24ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಯಾದಗಿರಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಯಾದಗಿರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ರಾಜು ಬಾವಿಹಳ್ಳಿ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಯಾದಗಿರಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯಾದಗಿರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯಾದಗಿರಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ, ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ 2024ರ ಮಾರ್ಚ್ 17 ರಿಂದ 18ರ ವರೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣ ಚಿತ್ತಾಪೂರ ರಸ್ತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಲು ನಿರ್ಧರಿಸಲಾಗಿದೆ.

ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವವರು 2024ರ ಮಾರ್ಚ್ 17 ರಂದು ಬೆಳಿಗ್ಗೆ 9 ಗಂಟೆಯ ಒಳಗೆ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು, 2024ರ ಮಾರ್ಚ್ 16ರ ಮಧ್ಯಾಹ್ನ 2 ಗಂಟೆ ಒಳಗೆ ತಮ್ಮ ಹೆಸರನ್ನು ಯಾದಗಿರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಾರ್ಯಾಲಯ ನೋಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಕಛೇರಿ ಮೊ.ನಂ.910817572, 9902812784, 8277191364ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳ ಆಯ್ಕೆ ಆಹ್ವಾನ

ಯಾದಗಿರಿ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಸೇವೆ ಪಡೆಯಲು ಮಾನವ ಸಂಪನ್ಮೂಲ ಸಂಸ್ಥೆಗಳ ಆಯ್ಕೆಗಾಗಿ ಆನ್‌ಲೈನ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಗರಿಮಾ ಪನ್ವಾರ್ ಅವರು ತಿಳಿಸಿದ್ದಾರೆ.

ವೆಬ್‌ಸೈಟ್ ನಲ್ಲಿ ಈ ಮೂಲಕ ಟೆಂಡರ್ ಆಹ್ವಾನಿಸಿದೆ. ಟೆಂಡರ್ ಸಲ್ಲಿಸಲು 2024ರ ಏಪ್ರಿಲ್ 20ರ ಆಗಿರುತ್ತದೆ. ಟೆಂಡರ್‌ಗೆ ಸಂಬoಧಿಸಿದ ಹೆಚ್ಚಿನ ಮಾಹಿತಿಯನ್ನು ಸಂಬoಧಿಸಿದ ಜಾಲತಾಣದಿಂದ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವಿಕಲಚೇತನರಿಂದ ಅರ್ಜಿ ಆಹ್ವಾನ

ಯಾದಗಿರಿ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗಾಜರಕೋಟ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಸ್ಥಾನಕ್ಕೆ ಗೌರವಧನ ಆಧಾರದ ಮೇಲೆ ಕರ್ತವ್ಯನಿರ್ವಹಿಸಲು ಆಸಕ್ತಿಯುಳ್ಳ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಶರಣಪ್ಪ ಪಾಟೀಲ್ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನ ಗಾಜರಕೋಟ ಗ್ರಾಮ ಪಂಚಾಯತ ಕಛೇರಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಯೋಜನೆಯ ಸಂಪರ್ಕ ಅನುಷ್ಠಾನದ ಹಿತದೃಷ್ಟಿಯಿಂದ ಈ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಖಾಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ  ಸ್ಥಾನಕ್ಕೆ ನಿಯಮಾನುಸಾರ ಅರ್ಹ ವಿಕಲಚೇತನರನ್ನು ತಾತ್ಕಾಲಿಕ ಗೌರವಧನ ಆಧಾರ ಮೇಲೆ ಸಮಿತಿ ಮೂಲಕ ನೇಮಕ ಮಾಡಬೇಕಾದ್ದರಿಂದ ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಮನವಿ ಪತ್ರದೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ಲಗತ್ತಿಸಬೇಕು, ವಿಕಲಚೇತನರ ಗುರುತಿನ ಚೀಟಿ ಯು.ಡಿ.ಐ.ಡಿ, ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 2 ಭಾವಚಿತ್ರ ಎಲ್ಲಾ ದಾಖಲೆಗಳೊಂದಿಗೆ ಜೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು, ಅರ್ಜಿ ನಮೂನೆಯನ್ನು ಎಮ್.ಆರ್.ಡಬ್ಲೂö್ಯ ಯಾದಗಿರಿಯಲ್ಲಿ ಪಡೆದು ಭರ್ತಿಮಾಡಿ 2024ರ ಮಾರ್ಚ್ 19ರ ಸಂಜೆ 5 ಗಂಟೆ ಒಳಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ.ಸಂ.08473 253531ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Most Popular

To Top
error: Content is protected !!