Gummata Nagari

Bijapur

ಯತ್ನಾಳ್ ನ್ಯಾಯಾಲಯಕ್ಕೆ ಹಾಜರಾದಾಗ ಭದ್ರತೆ ಒದಗಿಸಿ ಎಂದ ಹೈಕೋರ್ಟ

 

ಬೆಂಗಳೂರು: ಕನಕಪುರದಲ್ಲಿ ತನ್ನ ಮೇಲೆ ದಾಳಿ ನಡೆಯುವ ಭೀತಿ ಹಿನ್ನೆಲೆ ಡಿಕೆ ಶಿವಕುಮಾರ್ ಸಲ್ಲಿಸಿದ್ದ 204 ಕೋಟಿ ಪರಿಹಾರದ ದಾವೆಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಇತ್ಯರ್ಥಗೊಳಿಸಿದ ಕೋರ್ಟ್, ದಾವೆ ವರ್ಗಾವಣೆ ನಿರಾಕರಿಸಿದೆ. ಅಲ್ಲದೆ, ನ್ಯಾಯಾಲಯಕ್ಕೆ ಹಾಜರಾದಾಗ ಯತ್ನಾಳ್ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ.

ಏನಿದು ಪ್ರಕರಣ?
ಇಡಿ ಪ್ರಕರಣಗಳಿಂದ ರಕ್ಷಣೆ ಕೋರಿ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಡಿಕೆ ಶಿವಕುಮಾರ್ ಅವರು ವಿವಿಧ ಮೂಲಗಳಿಂದ ಒತ್ತಡ ಹೇರಲು ಯತ್ನಿಸಿದ್ದಾರೆ. ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದರು. ಅಲ್ಲದೆ, ನನ್ನನು ವಿರುದ್ಧದ ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣಗಳಿಂದ ಮುಕ್ತಿಗೊಳಿಸಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ವಿರೋಧವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾಗಿ ವಿಜಯಪುರದಲ್ಲಿ 2019 ರ ಜೂನ್ 23 ರಂದು ಯತ್ನಾಳ್ ಆರೋಪಿಸಿದ್ದರು.

ಈ ಆರೋಪದಿಂದಾಗಿ ಘನತೆ, ವರ್ಚಸ್ಸಿಗೆ ಹಾನಿಯುಂಟಾಗಿದೆ ಎಂದು ಆರೋಪಿಸಿ ಯತ್ನಾಳ್ ವಿರುದ್ಧ ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯಕ್ಕೆ 204 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.

ಆದರೆ, ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಕನಕಪುರದಲ್ಲಿ ದಾವೆ ಹೋಡಲಾಗಿದೆ. ಕೋರ್ಟ್ ವಿಚಾರಣೆಗಾಗಿ ನಾನು ಕನಕಪುರಕ್ಕೆ ಭೇಟಿ ನೀಡಿದರೆ ನನ್ನ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ” ಎಂದು ಭೀತಿ ವ್ಯಕ್ತಪಡಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡುವಂತೆ ಹೈಕೋರ್ಟ್ಗೆ ಯತ್ನಾಳ್ ಮನವಿ ಮಾಡಿದ್ದರು.

Most Popular

To Top
error: Content is protected !!