ಸೆ.30 ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು

0

Gummata Nagari : Newdelhi

ಹೊಸದಿಲ್ಲಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.30 ರಂದು ಪ್ರಕಟವಾಗಲಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬರೋಬ್ಬರಿ 28 ವರ್ಷಗಳ ನಂತರ ಪ್ರಕಟವಾಗಲಿದ್ದು ಇದಕ್ಕೆ ಸಂಬಂಧಿಸಿದಂತೆ ಲಕ್ನೊದ ವಿಶೇಷ ಸಿಬಿಐ ನ್ಯಾಯಾಧೀಶ ಎಸ್.ಕೆ.ಯಾದವ್ ತೀರ್ಪು ಪ್ರಕಟಿಸಲು ಬುಧವಾದ ದಿನ ನಿಗಧಿಪಡಿಸಿದರು.

ಅಯೋಧ್ಯ ಕ್ರಿಮಿನಲ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಪ್ರಧಾನಮಂತ್ರಿ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಹಾಗೂ ಉಮಾ ಭಾರತಿ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳು ಕೋರ್ಟ್ ನಲ್ಲಿ ಹಾಜರಿರಬೇಕೆಂದು ಸೂಚಿಸಿದೆ.

ಇನ್ನು ಬಾಬ್ರಿ ಮಸೀದಿ ಧ್ವಂಸಗೊಳಿಸಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪ ಹೊತ್ತಿರುವ ಎಲ್.ಕೆ.ಅಡ್ವಾನಿ ಜುಲೈ 24 ರಂದು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರೆ ಜುಲೈ 23 ರಂದು ಮುರಳಿ ಮನೋಹರ ಜೋಷಿ ಕೂಡ ತಮ್ಮ ಹೇಳಿಕೆ ದಾಖಲಿಸಿ ತಮ್ಮ ಮೇಲೆ ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.