ಅಪ್ರಿಯ ತೀರ್ಪು, ಮೇಲ್ಮನವಿಗೆ ಒತ್ತಾಯ

0

Gummata Nagari : India News

ಹೈದರಾಬಾದ್ : ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸಹಿತ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ, ಇದು ಅಪ್ರಿಯ ತೀರ್ಪು ಎಂದು ಕರೆದಿದ್ದು, ಸಿಬಿಐ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಉವೈಸಿ, ಡಿ.6ರಂದು ಮಸೀದಿಯನ್ನು ನೆಲಸಮಗೊಳಿಸಿದ್ದು ಒಂದು ರೀತಿಯ ಮ್ಯಾಜಿಕ್ ಆಗಿದೆಯೇ? ಅಲ್ಲಿಗೆ ಜನರನ್ನು ಒಂದುಗೂಡಿಲು ಯಾರು ಕರೆ ನೀಡಿದರು? ಅವರು ಅಲ್ಲಿಗೆ ಪ್ರವೇಶಿಸುವುದನ್ನು ಯಾರು ಖಚಿತಪಡಿಸಿಕೊಂಡರು? ಎಂದು ಪ್ರಶ್ನಿಸಿದರು.

ಸಿಬಿಐ ತನ್ನ ಸ್ವಾತಂತ್ರ್ಯವನ್ನು ರಕ್ಷಿಸಲು ತೀರ್ಪಿನ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಬೇಕು. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಇದರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ನಾನು ಒತ್ತಾಯಿಸುವೆ ಎಂದು ಉವೈಸಿ ಹೇಳಿದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.