ರೈಲ್ವೆ ಖಾತೆ ರಾಜ್ಯ ಸಚಿವ ಅಂಗಡಿ ವಿಧಿವಶ

0

Gummata Nagari : India News

ನವದೆಹಲಿ : ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ (65) ಬುಧವಾರ ನಿಧನ ಹೊಂದಿದ್ದಾರೆ.

ಲೋಕಸಭೆ ಅಧಿವೇಶನ ಆರಂಭವಾದಾಗ ಎಲ್ಲ ಸಂಸದರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅಂಗಡಿ ಅವರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ನಿಧನರಾಗಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು. ಸದ್ಯ ಕೇಂದ್ರ ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿ ಕೆಲಸ ಮಾಡುತ್ತಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.