Gummata Nagari

Bijapur

ಬಿಜಾಪುರ : ಜಿಲ್ಲಾಡಳಿತದಿಂದ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಆಚರಣೆ

 

ಬಿಜಾಪುರ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲ್ಲಿನ ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತೋತ್ಸವ ಶುಕ್ರವಾರದಂದು ಆಚರಿಸಲಾಯಿತು.

ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಶಿಷ್ಟಾಚಾರದಂತೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಶೀಲ್ದಾರರಾದ ಶ್ರೀಮತಿ ಕವಿತಾ ಅವರು ಬಸವಣ್ಣನವರ ಹಾಗೂ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.

ಇದಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೊನಾವಣೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ವಿವಿಧ ಸಮಾಜದ ಮುಖಂಡರಾದ ಶರಣು ಸಬರದ, ಭೀಮರಾಯ ಜಿಗಜಿನ್ನಿ, ಹಣಮಂತ ಮಾಚಪ್ಪನವರ, ಸುರೇಶ ದೇಸಾಯಿ, ಕೆ.ಕೆ.ಬನ್ನೆಟ್ಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Most Popular

To Top
error: Content is protected !!