ಕ್ಷೇತ್ರದ ಜನರು ಸುರಕ್ಷಿತವಾಗಿರಿ: ಮಾಜಿ ಸಿ.ಎಮ್ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಸೂಚನೆ

0

Gummata nagari : Bagalkot

ಬಾದಾಮಿ : ಮತಕ್ಷೇತ್ರದ ಸಾರ್ವಜನಿಕರು ಕೋವಿಡ್ 19 ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ ಕಾಲ್ ಡೌನ್ ನನ್ನು ಎಲ್ಲರು ಕಡ್ಡಾಯವಾಗಿ ಪಾಲಿಸಿ ಕರೋನಾ ವೈರಸ್‌ ತಡೆಗಟ್ಟಲು ಸಾರ್ವಜನಿಕರಲ್ಲಿ ಮಾಜಿ ಸಿ.ಎಮ್, ವಿರೋಧ ಪಕ್ಷದ ನಾಯಕ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ವಿನಂತಿಸಿಕೊಂಡಿದ್ದಾರೆ ಎಂದು ಬಾದಾಮಿ ನಗರದಲ್ಲಿ ಇರುವ ಶಾಸಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು.

ಇನ್ನು ಕರೋನಾ ವೈರಸ್‌ ಸೊಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ, ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದ್ದಾರೆ‌. ಬಾದಾಮಿ ಹಾಗೂ ಗುಳೇದಗುಡ್ಡ ಪಟ್ಟಣಗಳಲ್ಲಿ ಕೋವಿಡ್ 19 ಚಿಕಿತ್ಸಾ ಆಸ್ಪತ್ರೆಗಳನ್ನು ತೆರೆಯಲು ಸೂಚಿಸಿದ್ದಾರೆ.

ಬಾದಾಮಿ ತಾಲೂಕಾ ಮಟ್ಟದ ಅಧಿಕಾರಿಗಳಾದ ತಹಶಿಲ್ದಾರ, ತಾಲೂಕಾ ಆರೋಗ್ಯ ಅಧಿಕಾರಿಗಳು, ಹಾಗೂ ಪೋಲಿಸ್ ಇಲಾಖೆಯವರಿಗೆ ಸಾರ್ವಜನಿಕರು ಮನೆಯಲ್ಲಿ ವಾಸವಿದ್ದು ಹೊರಗಡೆ ಬಾರದ ಹಾಗೆ ಮನವೊಲಿಸಿ ತಿಳುವಳಿಕೆ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಸಿದ್ದಾರೆ ಹಾಗೂ ಸಾರ್ವಜನಿಕರಿಗೆ ಅಗತ್ಯ ವಸ್ತುಗಳಾದ ನೀರು, ಹಾಲು, ತರಕಾರಿ, ಮತ್ತು ಕಿರಾಣಿ ಸಾಮಗ್ರಿಗಳನ್ನು ಸುಸಜ್ಜಿತವಾಗಿ ಜನರು ಗುಂಪಾಗಿ ಸೇರಿದಂತೆ ಪುರೈಕೆ ಮಾಡಲು ತಾಲೂಕಾ ಆಡಳಿತದಿಂದ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಚಿಕಿತ್ಸೆಗೆ ಅಗತ್ಯವಾದ ಎಲ್ಲಾ ವ್ಯವಸ್ಥೆಗಳನ್ನು ಆಸ್ಪತ್ರೆಗಳಲ್ಲಿ ಇರುವಂತೆ ನೋಡಿಕೊಳ್ಳಬೇಕೆಂದು ತಾಲೂಕಾ ಆರೋಗ್ಯ ಅಧಿಕಾತಿಗಳಿಗೆ ಸೂಚಿಸಿ ಕೊರತೆ ಇದಲ್ಲಿ ತಕ್ಷಣ ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಮತ್ತು ನಗರ, ಹಾಗೂ ಗ್ರಾಮೀಣ ಭಾಗಗಳಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿಗಳಿಂದ ಗ್ರಾಮೀಣ ಮಟ್ಟದಲ್ಲಿ ಸ್ವಚ್ಚತೆ ಕಾಪಾಡಲು ಮತ್ತು ಎಲ್ಲ ಚರಂಡಿ ಮತ್ತು ರಸ್ತೆಗಳಲ್ಲಿ ಔಷಧವನ್ನು ಸಿಂಪರಣೆ ಮಾಡಲು ತುರ್ತಾಗಿ ಕ್ರಮ ಕೈಗೊಳ್ಳಲು ಕಟ್ಟು ನಿಟ್ಟಾಗಿ ಸೂಚಿಸಿದ್ದಾರೆ ಎಂದು ಹೊಳಬಸು ಶೆಟ್ಟರ್ ತಿಳಿಸಿದ್ದರು.
ಈ ಸಂದರ್ಭದಲ್ಲಿ ಎಮ್. ಬಿ. ಹಂಗರಗಿ, ಮಹೇಶ ಹೊಸಗೌಡ್ರ, ಭೀಮಸೇನ ಚಿಮ್ಮನಕಟ್ಟಿ, ಪಿ. ಆರ್. ಗೌಡರ, ಎಮ್. ಡಿ. ಎಲಿಗಾರ, ರಾಜಮಹ್ಮದ ಬಾಗವಾನ, ಮಂಜುನಾಥ ಹೊಸಮನಿ ಅನೇಕರು ಇದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.