ರೈತ ವಿರೋಧಿ ಕಾಯ್ದೆ ಕೈಬಿಡಲು ಆಗ್ರಹಿಸಿ ಬಾದಾಮಿಯಲ್ಲಿ ಪ್ರತಿಭಟನೆ

0

Gummata Nagari : Bagalkot News

ಬಾದಾಮಿ : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ರೈತ ಮುಖಂಡರು ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯ ನಡೆಸಲಾಯಿತು.

ಅಕ್ಕಮಹಾದೇವಿ ಕಲ್ಯಾಣ ಮಂಟಪದಿಂದ ಪ್ರಾರಂಭಗೊಂಡ ಮೆರವಣಿಗೆ ನಗರದ ಅಂಬೇಡ್ಕರ್ ವೃತ್ತ, ರಾಮದುರ್ಗ ವೃತ್ತ, ಬಸವೇಶ್ವರ ವೃತ್ತ, ಮಾರ್ಗವಾಗಿ ಪಿ.ಎಲ್.ಡಿ ಬ್ಯಾಂಕ್ ಎದುರಿಗೆ ಬಂದು ತಹಶೀಲ್ದಾರ ಸುಹಾಷ ಇಂಗಳೆ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಜಯ ಕರ್ನಾಟಕ ರಕ್ಷಣಾ ಸೇನೆ ಬಾಗಲಕೋಟೆ ಜಿಲ್ಲಾಧ್ಯಕ್ಷ ಮಹೇಶ ವಡ್ಡರ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು ರೈತರ ಹಿತಕಾಯುವದನ್ನು ಮರೆತ ಕಾರಣ ಇಂದು ರಾಜ್ಯಾದ್ಯಂತ ರೈತರು ಬೀದಿಗೆ ಇಳಿದು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಭೂ ಸುಧಾರಣೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀಕರಣ ಹಾಗೂ ಎಪಿಎಮ್ ಸಿ ಕಾಯ್ದೆಗಳ ತಿದ್ದುಪಡಿಯನ್ನು ಕೈ ಬಿಡಬೇಕು ರಾಜ್ಯ ಸರ್ಕಾರ ಜಾರಿಗೆ ತಂದ ತಿದ್ದುಪಡಿಗಳು ರೈತರಿಗೆ ಮಾರಕವಾಗಿದ್ದು. ರೈತರಿಗೆ ಕೃಷಿ ಭೂಮಿಯೇ ಆಧಾರವಾಗಿದ್ದು ಅವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಸರ್ಕಾರ ಕೂಡಲೇ ಸ್ಪಂದಿಸಬೇಕು. ದೇಶದ ಎಪ್ಪತ್ತರಷ್ಟು ಜನರು ರೈತರಾಗಿದ್ದಾರೆ ಆದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತಪರ ನಿಲುವನ್ನು ತಾಳುವ ಮೂಲಕ ರೈತರ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ, ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಮಾಹಾಂತೇಶ ಹಟ್ಟಿ, ರೈತ ಮುಖಂಡರು, ಕನ್ನಡಪರ ಸಂಘಟನೆಗಳು, ಹಾಗೂ ಅನೇಕ ಸಂಘ ಸಂಸ್ಥೆಗಳು ಭಾಗವಹಿಸಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.