ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

0

Gummata Nagari : Bagalkot News

ಬಾದಾಮಿ : ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ತಾಲೂಕಿನ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘವು ಪಿಂಚಣಿ ಹಾಗೂ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು ಮಾತನಾಡಿ ಬಸವರಾಜ್ ಹೊರಟ್ಟಿ ಅವರ ಆಯೋಗವು ಶಿಫಾರಸು ಮಾಡಿದ ಕಾಲ್ಪನಿಕ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸುವುದು. ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವುದು. ಅನುದಾನಿತ ಇನ್ನುಳಿದ ಸರಕಾರಿ ನೌಕರರಂತೆ ನಮಗೂ ಕೂಡಾ N.P.S.ಯೋಜನೆಯನ್ನು ಜಾರಿಗೊಳಿಸುವುದು. ಅನುದಾನಿತ ಶಾಲಾ ಮಕ್ಕಳಿಗೂ ಸರಕಾರಿ ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ಜಾರಿಗೆ ತರುವುದು. ಮುಖ್ಯ ಶಿಕ್ಷಕರಿಗೆ ಒಂದು ಹೆಚ್ಚುವರಿ ಬಡ್ತಿ ನೀಡುವುದು.ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಿಕೊಳ್ಳುಬೇಕೆಂದು ಒತ್ತಾಯಿಸಿದರು.

ಇನ್ನು ಅನೇಕ ಬೇಡಿಕೆಗಳನ್ನು ಕಳೆದ ಹತ್ತು ವರ್ಷಗಳಿಂದ ಸರಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಕೂಡಾ ಸರಕಾರ ನಮ್ಮ ಬಗ್ಗೆ ಮಲತಾಯಿ ಧೋರಣೆ ತೋರಿ ಜಾಣಕುರುಡು ಪ್ರದರ್ಶನ ಮಾಡುತ್ತಿರುವುದು ಬೆಸರದ ಸಂಗತಿ ಎಂದು ಅನುದಾನಿತ ಶಾಲಾ ನೌಕರರ ಸಂಘದ ಮುಖಂಡರಾದ ಪುಟ್ಟೇಶ್ ಲಮಾಣಿ, ಹನಮಂತಪ್ಪ ಬಂಡಿವಡ್ಡರ ಮಾತನಾಡಿದರು. ಈಗಲಾದರೂ ಸರಕಾರ ನಮ್ಮ ಈ ಹೋರಾಟವನ್ನು ಗಣನೆಗೆ ತೆಗೆದುಕೊಂಡು ನಮ್ಮ ಬೇಡಿಕೆಗಳನ್ನು ಈಡೇರಿಸಲು ಗಮನ ಹರಿಸಬೇಕು ಎಂದು ಮನವಿ ಮಾಡಿಕೊಂಡರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.