ದೆಹಲಿಯಲ್ಲಿ ಸುರೇಶ್ ಅಂಗಡಿ ಅವರ ಸಮಾಧಿ, ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ನಿರ್ಮಿಸಲು ಮನವಿ

0

Gummata Nagari : Bangalore News

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಕೇಂದ್ರ ರಾಜ್ಯ ಖಾತೆ ರೈಲ್ವೇ ಸಚಿವರಾಗಿದ್ದ ದಿವಂಗತ ಸುರೇಶ್‌ ಅಂಗಡಿ ಅವರ ಅಂತ್ಯಕ್ರಿಯೆ ನಡೆಸಿದ ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ಹಾಗೂ ಸಮಾಧಿ ನಿರ್ಮಾಣದ ವಿಷಯವಾಗಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರಿಗೆ ಇಂದು‌ ದಿವಂಗತ ಸುರೇಶ್‌ ಅಂಗಡಿ ಅವರ ಅಳಿಯ ಸಂಕಲ್ಪ ಶೆಟ್ಟರ್‌ ಹಾಗೂ ಡಾ ರಾಹುಲ್‌ ಪಾಟೀಲ್‌ ಮನವಿಯನ್ನ ಸಲ್ಲಿಸಿದರು.

ಕರೋನಾ ರೋಗಕ್ಕೆ ತುತ್ತಾಗಿ ಸೆಪ್ಟೆಂಬರ್‌ 23 ರಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್‌ ಅಂಗಡಿ ಅವರು ನಿಧನರಾಗಿದ್ದರು. ಕರೋನಾ ಹಿನ್ನಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಗಿತ್ತು. ಈ ಸ್ಥಳದಲ್ಲಿ ದಿವಂಗತರ ಘನತೆಗೆ ತಕ್ಕುದಾದಂತಹ ಸಮಾಧಿಯನ್ನು ನಿರ್ಮಿಸುವ ಮೂಲಕ ಗೌರವ ಸಲ್ಲಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ದೆಹಲಿಯ ದ್ವಾರಕದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಗೆ ಕಾಂಪೋಂಡ್‌ ಹಾಗೂ ಸಮಾಧಿಯನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಉಪಸ್ಥಿತರಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.