ಕಡ್ಡಾಯವಾಗಿ ಮಾಸ್ಕ್ ಧರಿಸಲು ಸದ್ರುಪಾನಂದ ಸ್ವಾಮೀಜಿ ಸಲಹೆ

ಮಾಳಚಾಪೂರ, ಖಾನಾಪೂರ್ ಸರಕಾರಿ ಶಾಲೆಯ ಮಕ್ಕಳಿಗೆ ಮಾಸ್ಕ್ ವಿತರಣೆ

0

Gummata Nagari : Bidar News

ಭಾಲ್ಕಿ : ತಾಲೂಕಿನ ಮಾಳಚಾಪೂರ್ ಹಾಗೂ ಖಾನಾಪೂರ್ ಗ್ರಾಮದ ಸರಕಾರಿ ವಠಾರ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾಲೂಕು ಭಾರತ ಮಾತಾ ಸೇವಾ ಸಮಿತಿ ವತಿಯಿಂದ ಸದ್ರುಪಾನಂದ ಸ್ವಾಮೀಜಿ ಮಾಸ್ಕ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾಮಾರಿ ಕೊರೊನಾ ಸೋಂಕು ಇಡೀ ಮನುಕುಲವನ್ನೇ ತಲ್ಲಣಗೊಳಿಸಿದೆ. ಈ ರೋಗಕ್ಕೆ ಇದು ವರೆಗೂ ನಿರ್ದಿಷ್ಟ ಔಷಧಿ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಸೋಂಕು ತಡೆಗಟ್ಟಲು ಸರಕಾರ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ. ವೈರಸ್ ಸಂಪೂರ್ಣ ನಿಯಂತ್ರಣಕ್ಕೆ ಬರುವ ವರೆಗೂ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ಭಾರತ್ ಮಾತಾ ಸೇವಾ ಸಮಿತಿ ಅಧ್ಯಕ್ಷ ಪಪ್ಪು ಪಾಟೀಲ್ ಖಾನಾಪೂರ್ ಮಾತನಾಡಿ, ವಠಾರ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಾಗೇಶ ಪಾಟೀಲ, ವಿಜಯ, ಪ್ರಮೋದ್ ಸೇರಿದಂತೆ ಹಲವರು ಇದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.