ಮಾರಾಟ ಮಳಿಗೆಯ ಕೀಟನಾಶಕ ಪರವಾನಗಿ ಅಮಾನತು

0

Gummata Nagari : Gadag News

ಗದಗ : ಗದಗ ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕ (ಜಾರಿದಳ) ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ವೇಳೆ ಕೀಟನಾಶಕ ಪರವಾನಗಿಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟಿದೆ.

ಹೀಗಾಗಿ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕಣವಿ ಇವರ ಪರವಾನಿಗೆಯನ್ನು ಅಮಾನತ್ತಿನಲ್ಲಿಟ್ಟು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.