Gummata Nagari : Kalaburgi News
ಚಿತ್ತಾಪುರ : ಪಟ್ಟಣದಿಂದ ಕಲಬುರ್ಗಿಗೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಈ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಪ್ರಮುಖ ರಸ್ತೆಗಳಲ್ಲಿ ಸದ್ಯ ಹತ್ತಾರು ಗುಂಡಿಗಳದ್ದೇ ಕಾರುಬಾರು! ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ.
ಕಳೆದ ಕೆಲ ವರ್ಷಗಳ ಹಿಂದೆ ಶಾಸಕ ಪ್ರಿಯಾಂಕ್ ಖರ್ಗೆ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಕೋಟ್ಯಾಂತರ ರೂ. ಅನುದಾನದಲ್ಲಿ ಪಟ್ಟಣದ ಲಾಡ್ಜಿಂಗ್ ಕ್ರಾಸ್ ದಿಂದ ಕಲಬುರಗಿಗೆ ಹಾಗೂ ಪಟ್ಟಣದಿಂದ ರಾವೂರ, ವಾಡಿ(ಜಂ) ಹೀಗೆ ನಾನಾ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗಿತ್ತು. ಕಳೆದ ಎರಡು ತಿಂಗಳಿಂದ ಸುರಿದ ಮಳೆಯಿಂದಾಗಿ ಕೆಲ ಪ್ರಮುಖ ರಸ್ತೆಗಳಲ್ಲಿಯೇ ಈಗ ಗುಂಡಿಗಳು ಏರ್ಪಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಪರದಾಡುವಂತಾಗಿದೆ.
ರಸ್ತೆ ಕಾಮಗಾರಿ ಕೈಗೆತ್ತಿಕೊಂಡ ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳಾಗಿ ಮಾರ್ಪಟ್ಟಿವೆ. ಅಷ್ಟೇ ಅಲ್ಲದೆ ಕೆಲ ರಸ್ತೆಗಳು ಡಾಂಬರೀಕರಣದ ಡಾಂಬರ್ ಕಿತ್ತು ಕಂಕರ್ ತೇಲಿದೆ.
ಪ್ರಮುಖ ರಸ್ತೆಗಳ ಸೂಕ್ತ ನಿರ್ವಹಣೆ ಇಲ್ಲದಂತಾಗಿದೆ. ಇದರಿಂದ ಹಲವು ರಸ್ತೆಗಳಲ್ಲಿ ಗುಂಡಿಗಳು ಏರ್ಪಡುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿರುವುದರಿಂದ ಯಾತನೆ ಅನುಭವಿಸಬೇಕಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಸ್ತೆ ದುರಸ್ತಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube । Instagram ಅನುಸರಿಸಿ..