ಭಾರಿ ಮಳೆ: ಅಹಿತಕರ ಘಟನೆ ಸಂಭವಿಸದಂತೆ ಕ್ರಮಕ್ಕೆ DC ಸೂಚನೆ

ಜಿಲ್ಲಾ ವಿಪತ್ತು ವಿರ್ವಹಣಾ ಪ್ರಾಧಿಕಾರವು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರ ಸುರಕ್ಷತಾ ದೃಷ್ಟಿಯಿಂದ ಹಲವು ಕ್ರಮ

0

ಜಿಲ್ಲೆಯಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದ್ದು,
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರದ ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ನೀರು ನುಗ್ಗಿ ಜನವಸತಿ ಪ್ರದೇಶದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿರುವುದು ಕಂಡು ಬರುತ್ತಿರುದೆ

ರಾಯಚೂರು: ಜಿಲ್ಲೆಯಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದ್ದು,
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರದ ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ನೀರು ನುಗ್ಗಿ ಜನವಸತಿ ಪ್ರದೇಶದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿರುವುದು ಕಂಡು ಬರುತ್ತಿರುದೆ.
ಜಿಲ್ಲಾ ವಿಪತ್ತು ವಿರ್ವಹಣಾ ಪ್ರಾಧಿಕಾರವು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರ ಸುರಕ್ಷತಾ ದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಂಡಿದೆ.
ಅದರ ಸೂಕ್ತ ನಿರ್ವಹಣೆಗಾಗಿ ಅಧಿಕಾರಿಗಳನ್ನು ನಿಯೋಜಿಸಿದ್ದು,
ಅವರುಗಳು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಭಾರಿ ಪ್ರಮಾಣದಲ್ಲಿ ನೀರು ಶೇಖರಣೆಯಾಗಿದ್ದರೆ,
ತಗ್ಗು ಪ್ರದೇಶದಿಂದ ನೀರನ್ನು ಹೊರ ಹಾಕುವ ವ್ಯವಸ್ಥೆ ಮಾಡಬೇಕು.
ಮಳೆ ನೀರಿನಿಂದ ಜನರು ತೊಂದರೆಗೆ ಸಿಲುಕಿದ್ದರೆ, ಅವರನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಿ
ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಬೇಕು, ಆ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ
ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕು.
ಜಿಲ್ಲೆಯ ಕೆರೆಗಳು ಭರ್ತಿಯಾಗಿದ್ದರಿಂದ ಜನರಿಗೆ ತೊಂದರೆಯಾಗದಂತೆ ಸುರಕ್ಷಿತವಾಗಿ ಕೆರೆ ನೀರನ್ನು ಹೊರ ಹೋಗುವಂತೆ ವ್ಯವಸ್ಥೆ ಮಾಡಬೇಕು.
ಭಾರಿ ಮಳೆಯಿಂದ ಮಳೆಯ ನೀರು ಮನೆಗಳಿಗೆ ನುಗ್ಗಿರುವುದರ ಕುರಿತು ಹಾಗೂ ಮನೆಗಳು ಹಾನಿಯಾಗಿದ್ದರೆ,
ತಜ್ಞರ ತಂಡ ರಚಿಸಿ ಮನೆಗಳ ಸಮೀಕ್ಷೆ ಕೈಗೊಂಡು ವರದಿ ನೀಡಬೇಕು.
ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳು ಹಾನಿಯಾಗಿದ್ದರೆ, ಸಂಬಂಧಿಸಿದ ಇಲಾಖೆಗಳು ಕಂದಾಯ ಇಲಾಖೆಯೊಂದಿಗೆ ಜಂಟಿ ಸಮೀಕ್ಷೆ ಕೈಗೊಂಡು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು.
ಭಾರಿ ಮಳೆಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಪ್ರವಾಹವನ್ನು ಎದುರಿಸಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ, ಒಂದು ವೇಳೆ ಕರ್ತವ್ಯ ನಿರ್ಲಕ್ಷ್ಯತೆ ವಹಿಸಿದರೆ, ಅಂತವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ-೨೦೦೫ ರನ್ವಯ ಕ್ರಮ
ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಜಿಲ್ಲಾಧಿಕಾರಿಗಳಾದ ಆರ್. ವೆಂಕಟೇಶ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.