ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟ

0

Gummata nagari : bangalore

ಬೆಂಗಳೂರು: ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅದಕ್ಕಾಗಿ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಇನ್ನು ಮುಂದೆ ವಿವಿಧ ಸಾಮಾಜಿಕ, ಧಾರ್ಮಿಕ ಸಮಾರಂಭಗಳು ಹಾಗೂ ರಾಜಕೀಯ ಸಭೆಗಳು, ರ್ಯ್ಯಾಲಿಗಳು ಇತ್ಯಾದಿಗಳ ಸಂದರ್ಭದಲ್ಲಿ ಸೇರಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ಮಿತಿಗೊಳಿಸಿದೆ.

ವಿದ್ಯಾಗಮವೂ ಸೇರಿದಂತೆ 6 ರಿಂದ 9 ನೇ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12 ನೇ ತರಗತಿಗಳು ಪ್ರಸ್ತುತ ಇರುವಂತಯೇ ಮುಂದುವರೆಯುತ್ತವೆ. ಆದಾಗ್ಯೂ, ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ ಮಂಡಳಿಯ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತು ಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ 10, 11 ಹಾಗೂ 12 ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಅವಕಾಶವಿರುತ್ತದೆ, ಆದರೆ ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಸಾಮಾನ್ಯವಾಗಿ ನಿವಾಸಿಗಳು, ಜನರು ಸೇರುವ ಸ್ಥಳಗಳಾದ ಜಿಮ್, ಪಾರ್ಟಿ ಹಾಲ್‌ಗಳು ಕ್ಲಬ್ ಹೌಸ್‌ಗಳು, ಈಜು ಕೊಳಗಳು, ಇತ್ಯಾದಿಗಳು ಮುಚ್ಚಲ್ಪಟ್ಟಿರುತ್ತವೆ.

ಉಳಿದಂತೆ ಎಲ್ಲಾ ಜಿಮ್‌ಗಳು ಹಾಗೂ ಈಜುಕೊಳಗಳು ಮುಚ್ಚಲ್ಪಟ್ಟಿರುತ್ತವೆ. ಯಾವುದೇ ತರಹದ ರ್ಯ್ಯಾಲಿಗಳು ಮುಷ್ಕರ, ಧರಣಿ ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಮತ್ತು ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗಧಿಪಡಿಸಿರುವ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ. ಕಚೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವ ಅಭ್ಯಾಸ, ವ್ಯವಸ್ಥೆಯನ್ನು ಪಾಲಿಸುವುದು.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಿ.ಬಿ.ಎಂ.ಪಿ ಸೇರಿದಂತೆ, ಮೈಸೂರು , ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಹಾಲ್‌ಗಳಲ್ಲಿ ಪರ್ಯಾಯ ಆಸನಗಳಲ್ಲಿ ಕೂರುವಂತೆ, ಒಂದು ಬಿಟ್ಟು ಒಂದು ಸೀಟ್ ನಲ್ಲಿ ಗರಿಷ್ಠ 50% ವೀಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸುವುದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಿ.ಬಿ.ಎಂ.ಪಿ ಸೇರಿದಂತೆ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಗರಿಷ್ಠ, ಗ್ರಾಹಕರ ಸಂಖ್ಯೆಯು ಶೇ.50 ರಷ್ಟು ಮೀರುವಂತಿಲ್ಲ, ಕೋವಿಡ್ ಮುನ್ನೆಚ್ಚರಿಕೆಗಾಗಿ ಕಡ್ಡಾಯವಾಗಿ ಮುಖಗವಸು ದೈಹಿಕ ಅಂತರ ಪಾಲನೆ, ಹ್ಯಾಂಡ್ ಸಾನಿಟೈಸರ್, ಹ್ಯಾಂಡ್ ವಾಶ್ ಗಳ ಬಳಕೆಯನ್ನು ಜಾರಿಗೊಳಿಸುವುದು. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುವುದು. ಶಾಪಿಂಗ್ ಮಾಲ್‌ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್‌ಗಳು ಹಾಗೂ ಡಿಪಾರ್ಟ್‌ಮೆಂಟಲ್ ಸ್ಟೋರ್‌ಗಳಲ್ಲಿ ಶಿಷ್ಟಾಚಾರದನ್ವಯ ಕೋವಿಡ್ ಮುನ್ನೆಚ್ಚರಿಕೆಗಾಗಿ ಸೂಕ್ತ ವರ್ತನೆಗಳನ್ನು ಅಂದರೆ ಕಡ್ಡಾಯವಾಗಿ ಮುಖಗವಸು, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್ , ಹ್ಯಾಂಡ ವಾಶ್ ಗಳ ಬಳಕೆಯನ್ನು ಜಾರಿಗೊಳಿಸುವುದು.

ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರಾ ಮಹೋತ್ಸವಗಳು, ಮೇಳಗಳು, ಗುಂಪು ಸೇರುವುದರ ನಿಷೇಧ ಮುಂದುವರೆಯುತ್ತದೆ. ವಿವಿಧ ಸಭೆ, ಸಮಾರಂಭ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ದಿನಾಂಕ 12.03.2021 ರಲ್ಲಿರುವ ಸುತ್ತೋಲೆಯಂತೆ ಮುಂದುವರಿಸಿದೆ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು, ಇವುಗಳಿಗೆ ಸಂಬಂಧಪಟ್ಟಂತೆ ಈಗಾಗಲೇ ಜಾರಿಯಲ್ಲಿರುವ ನಿಯಮ, ಆದೇಶಗಳನ್ನು ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು. ಈ ಮೇಲೆ ತಿಳಿಸಿದ ನಿಯಮಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದ ಪಕ್ಷದಲ್ಲಿ, ಅಂತಹ ವ್ಯಕ್ತಿ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ , 2005 ರ ವಿಭಾಗ 51 ರಿಂದ 60 ರ ಅನ್ವಯ , ಐ ಪಿ ಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ , 2020 ರ ವಿಭಾಗ 4,5 ಮತ್ತು 10 ರಂತೆ ಕ್ರಮಗಳನ್ನು ಜರುಗಿಸಲಾಗುವುದು, ಈ ಮೇಲೆ ತಿಳಿಸಿರುವ ನಿಯಮಗಳು ಹಾಗೂ ನಿರ್ಬಂಧಗಳು 20.04.2021 ರವರೆಗೆ ಚಾಲ್ತಿಯಲ್ಲಿರುತ್ತವೆ

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.