ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಲು ಮನವಿ

0

Gummata Nagari : Bijapur News

ಬಿಜಾಪುರ : ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜೀವನ ಭದ್ರತೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಸುದೀರ್ಘವಾದ ಮನವಿ ಪತ್ರವನ್ನು ಸರ್ಕಾರಗಳಿಗೆ ಸಲ್ಲಿಸಲಾಯಿತು.

ಕಾರ್ಮಿಕ ಮುಖಂಡ ಎಚ್.ಟಿ. ಮಲ್ಲಿಕಾರ್ಜುನ ಮಾತನಾಡಿ, ಬಿಜಾಪುರ ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರು ಸೌಲಭ್ಯಗಳಿಂದ ವಂಚಿತವಾಗಿದ್ದಾರೆ, ಜಿಲ್ಲೆಗೆ ಕೈಗಾರಿಕೆ ಕೊರತೆ ಎದ್ದು ಕಾಣುತ್ತಿದೆ ಯುವಕರು ಬೇರೆ ರಾಜ್ಯ ಮತ್ತು ದೊಡ್ಡ ನಗರಗಳಿಗೆ ಗುಳೆ ಹೋಗುವುದು ತಪ್ಪಿಸುವಲ್ಲಿ ಸರಕಾರ ಮತ್ತು ಜನಪ್ರತಿನಿಧಿಗಳು ಮನಸ್ಸು ಮಾಡುತ್ತಿಲ್ಲ, ಜಿಲ್ಲೆಯಲ್ಲಿ 2 ಕೈಗಾರಿಕಾ ಪ್ರದೇಶಗಳಿವೆ ಆದರೆ ನೂರಾರು ಜನ ಕೆಲಸ ಮಾಡುವ ಕಂಪನಿಗಳೇ ಇಲ್ಲ, ಈ ಬಾಗದ ಜನರಿಗಾಗಿ ಶ್ರಮಧರಿತ ಕೌಗಾರಿಕೆ ಸ್ಥಾಪನೆ ಮಾಡಬೇಕು.

ಈ ದೇಶದಲ್ಲಿ ಒಟ್ಟಾರೆ ದುಡಿಯುವ ಜನರ ಶೇ.90 ರಷ್ಟಿರುವ ಈ ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿಗತಿಗಳು ಅತ್ಯಂತ ಹೀನಾಯವಾಗಿದೆ ಎಂದರು. ಗ್ರಾಮೀಣ ಕೃಷಿ ಹಾಗೂ ಇತರ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಮನೆಗೆಲಸದ ಕಾರ್ಮಿಕರು, ಅಂಗಡಿ-ಮುಗ್ಗಟ್ಟುಗಳಲ್ಲಿ ಕೆಲಸ ಮಾಡುವವರು, ಅಟೋ ಇನ್ನಿತರ ಲಘುವಾಹನ ಚಾಲಕರು ಇತ್ಯಾದಿ ನೂರಾರು ರೀತಿಯ ಶ್ರಮಗಳನ್ನು ಮಾಡುತ್ತಿರುವ ಈ ಅಪಾರ ಸಂಖ್ಯೆಯ ದುಡಿಯುವ ಜನರು ದೇಶದ ಜಿಡಿಪಿಗೆ ಅರ್ಧದಷ್ಟು ಪಾಲು ಕೊಡುವವರಾಗಿದ್ದಾರೆ. ಆದರೆ ಈ ಕಾರ್ಮಿಕರು ಅತ್ಯಂತ ಕಡಿಮೆ ವೇತನ ಅದರಲ್ಲೂ ಕನಿಷ್ಠ ವೇತನಕ್ಕಿಂತಲೂ ಕಡಿಮೆ ವೇತನದಲ್ಲಿ ದುಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಮಾತ್ರ ನೋವಿನ ಸಂಗತಿ ಎಂದು ಎಚ್.ಟಿ. ಮಲ್ಲಿಕಾರ್ಜುನ ಹೇಳಿದರು.

ಈ ಕಾರ್ಮಿಕರ ಕಲ್ಯಾಣಕ್ಕಾಗಿ, ಜೀವನ ಹಾಗೂ ಸಾಮಾಜಿಕ ಭದ್ರತೆಗಾಗಿ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ಗ್ರಾಮೀಣ ಕಾರ್ಮಿಕರಿಗೆ ವರ್ಷಪೂರ್ತಿ ಕೆಲಸ, ಉದ್ಯೋಗಖಾತ್ರಿ ಕಾರ್ಮಿಕರಿಗೆ ಕನಿಷ್ಠ ಕೂಲಿ ರೂ 600 ರೂ. ನೀಡುವುದು, ಉಚಿತ ಆರೋಗ್ಯ ವಿಮೆ, ವಸತಿ ಸೌಕರ್ಯಗಳನ್ನು ಖಾತ್ರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನಿಲ ಸಿದ್ರಾಮಶೆಟ್ಟಿ, ದುಂಡೇಶ ಬಿರಾದಾರ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಭಾಗವಹಿಸಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.