ಮನೆ ಮೇಲೆ ಕಪ್ಪು ಬಾವುಟ ಹಾರಿಸಿ ಪ್ರತಿಭಟನೆ

ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಎಸ್ಟಿ ತಡೆ ಹಿಡಿದಿರುವ್ಯದಕ್ಕೆ ಖಂಡನೆ

0

Gummata Nagari : Bijapur News

ಬಿಜಾಪುರ : ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದ್ದರೂ ಅನವಶ್ಯಕವಾಗಿ ಗೊಂದಲ ಸೃಷ್ಟಿಸಿ ಪ್ರಮಾಣ ಪತ್ರ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸಮುದಾಯದವರು ಪ್ರತೀ ಮನೆ ಮೇಲೆ ಕಪ್ಪು ಬಾವುಟ ಹಾರಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

ಹೋರಾಟಕ್ಕೆ ಕರೆ ನೀಡಿರುವ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರು ಮಾತನಾಡಿ, ಈಗಾಗಲೇ ಕೇಂದ್ರ ಸರ್ಕಾರ ಕುಲಶಾಸ್ತ್ರಿಯ ಅಧ್ಯಯನದ ಪ್ರಕಾರ ತಳವಾರ ಮತ್ತು ಪರಿವಾರ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡಿ ರಾಜ್ಯ ಪತ್ರ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ಸಮುದಾಯದ ಮಕ್ಕಳು ಸರ್ಕಾರಿ ಸೌಲಭ್ಯಗಳಿಂದ ವಂಚಿತಗೊಳ್ಳುತ್ತಿದ್ದಾರೆ. ನೇಮಕಾತಿಯಿಂದ ದೂರ ಉಳಿಯುತ್ತಿದ್ದಾರೆ. ಬರುವ ಗ್ರಾಪಂ ಚುನಾವಣೆಯಿಂದಲೂ ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ಕೂಡಲೇ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯಿಸದರು. ನ್ಯಾಯಯುತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯಲ್ಲಿ ಮೂರು ಹಂತದ ಹೋರಾಟ ಮುಕ್ತಾಯಗೊಂಡಿದ್ದು ಮತ್ತೊಂದು ಸುತ್ತಿನ ಬೃಹತ್ ಹೋರಾಟ ರೂಪಿಸಲಾಗುತ್ತಿದೆ. ಅದಕ್ಕೂ ಮುನ್ನ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿ ಪ್ರತೀ ಮನೆ ಮೇಲೆ ಕಪ್ಪು ಬಾವುಟ ಪ್ರದರ್ಶಿಸಲಾಗುತ್ತಿದೆ ಎಂದರು.

ನ್ಯಾಯಯುತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಧಿವೇಶನ ಸಂದದರ್ಭದಲ್ಲಿ ಶಾಂತಿಯುತ ಹೋರಾಟಕ್ಕೆ ಅನುಮತಿ ಕೇಳಲಾಗಿ ಅಧಿಕಾರಿಗಳು ನಿರಾಕರಿಸುವ ಮೂಲಕ ಪ್ರಜಾಪ್ರಭುತ್ವ ವಿರೋಧ ನೀತಿ ಅನುಸರಿಸಿದ್ದಾರೆ, ಈ ಎಲ್ಲ ಪರಿಸ್ಥಿತಿ ಅವಲೋಕಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಲ್ಲ ಸರ್ವಾಧಿಕಾರಿ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ ಎಂಬಂತೆ ತೋರುತ್ತಿದೆ ಎಂದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.