ಮಾನ್ವಿ: ಪೌರ ಕಾರ್ಮಿಕರ ದಿನಾಚರಣೆ
ಕರ್ನಾಟಕ ರಾಜ್ಯ ಪೌರಸೇವ ನೌಕರರ ಸೇವಾ ಸಂಘದಿಂದ ಮೆರವಣಿಗೆ
ಮಾನ್ವಿ : ಪುರಸಭೆ ಕಾರ್ಯಾಲಯ ಮತ್ತು ಕರ್ನಾಟಕ ರಾಜ್ಯ ಪೌರಸೇವ ನೌಕರರ ಸೇವಾ ಸಂಘದಿಂದ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪುರಸಭೆ ಕಚೇರಿವರೆಗೆ ಮೆರವಣಿಗೆ ನಡೆಯಿತು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪುರಸಭೆ ಹಿರಿಯ ಸದಸ್ಯ ರಾಜಾಮಹೇಂದ್ರ ನಾಯಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ನೂರಾರು ಪೌರ ಕಾರ್ಮಿಕರು ಭಾಗವಹಿಸಿ ಡೋಳ್ಳು ಕುಣಿತಕ್ಕೆ ಹೆಜ್ಜೆ ಹಾಕಿದರು. ಸಂಭ್ರಮಿಸಿದರು. ಪುರಸಭೆ ಕಸ ವಿಲೇವಾರಿ ವಾಹನಗಳಿಗೆ ಹೂವಿನಿಂದ ಅಲಂಕರಿಸಲಾಗಿತ್ತು. ಮೆರವಣಿಗೆ ಬಸವ ವೃತ್ತದಿಂದ ಬಸ್ ನಿಲ್ದಾಣದ ಮೂಲಕ ಪುರಸಭೆ ಕಾರ್ಯಾಲಯಕ್ಕೆ ಬಂದು ಸೇರಿತು. ನಂತರ ಪುರಸಭೆ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಬಾಷಸಾಬ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲಾಗೌಡ, ಜೆ.ಇ. ಶರಣಪ್ಪ, ನೈರ್ಮಲ್ಯ ಹಿರಿಯ ಅಧಿಕಾರಿ ಹಂಪಣ್ಣ, ಈರಣ್ಣ ನಾಯಕ, ರಾಘವೇಂದ್ರ, ಜಾಫರ್ ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube । Instagram ಅನುಸರಿಸಿ..