ಜಿಲ್ಲಾಧ್ಯಕ್ಷರಾಗಿ ದಯಾನಂದ ಕಸಮೂಳೆ ನೇಮಕ

ಕರ್ನಾಟಕ ರಾಜ್ಯ ರೈತ ಸಂಘ, ರೈತ ಸೇನೆ:

0

ಚಡಚಣ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಬಿಜಾಪುರ ಜಿಲ್ಲಾಧ್ಯಕ್ಷರಾಗಿ ಉಮರಾಣಿ ಗ್ರಾಮದ ದಯಾನಂದ ಕಸಮೂಳೆ ಅವರನ್ನು ರಾಜ್ಯಾಧ್ಯಕ್ಷ ಶಾಂತಗೌಡ ಪಾಟೀಲ್ ಆದೇಶದ ಮೇರೆಗೆ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜಾಪುರ ಜಿಲ್ಲಾ ನೂತನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಅಧ್ಯಕ್ಷರಾಗಿ ನೇಮಕಗೊಂಡ ದಯಾನಂದ ಕಸಮೂಳೆ ಮಾತನಾಡಿ, ಬಿಜಾಪುರ ಜಿಲ್ಲೆಯ ರೈತರ ಸಮಸ್ಯೆ ಹಾಗೂ ಕುಂದು-ಕೊರತೆಗೆ ಧ್ವನಿಯಾಗಿ ಸ್ಪಂದಿಸಿ, ಸಮಸ್ಯೆ ಬಗ್ಗೆ ಹರಿಸಲು ಪ್ರಾಮಾಣಿಕ ಪ್ರಯತ್ನಿಸುತ್ತೇನೆ. ಸದಾ ರೈತಪರವಾಗಿ ಹೋರಾಟ ನಡೆಸಿ, ರೈತರಿಗೆ ನ್ಯಾಯ ಒದಗಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರೇವಣಸಿದ್ಧಗೌಡ ಗೋಡಕೆ, ಪಿಎಸ್‌ಐ ಪರಶುರಾಮ ಮಿರ್ಜಿಗಿ, ರಾಘವೇಂದ್ರ ದೊಡ್ಮನಿ, ಸುಭಾಷ ಪೂಜಾರಿ, ರಮೇಶ ಕದರಿ, ರೇವಣಸಿದ್ಧ ಸೊಕನಹಳ್ಳಿ, ಜಾಂಗೀರ ಶೇಖ, ನುಸರತ ಬಿರಾದಾರ, ಮಲ್ಲುಗೌಡ ಬಿರಾದಾರ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.