ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

0

Gummata Nagari : Bijapur News

ಬಿಜಾಪುರ : ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನೇತೃತ್ವ ವಹಿಸಿದ್ದ ಒಕ್ಕೂಟದ ಜಿಲ್ಲಾಧ್ಯಕ್ಷ ಚಂದ್ರಶೇಖರ ಲೆಂಡಿ ಮಾತನಾಡಿ, ಆಳುವ ಸರ್ಕಾರಗಳು ಖಾಲಿ ಹುದ್ದೆ ಭರ್ತಿಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿ, ಇನ್ನೂ ಲಕ್ಷಾಂತರ ಯುವಕರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ ಎಂದರು. ಇತ್ತೀಚಿನ ದಿನಗಳಲ್ಲಿ ಸರ್ಕಾರ 55 ವರ್ಷ ಮೇಲ್ಪಟ್ಟ ನೌಕರರನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಕೈ ಬಿಡಬೇಕು, ಇದು ನೌಕರ ವಿರೋಧಿ ಆದೇಶವಾಗಿದೆ ಎಂದರು.

ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರದ್ದುಗೊಳಿಸಿರುವ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ಹೆಚ್ಚಳ ಹಾಗೂ ಗಳಿಕೆ ರಜೆ ಸೌಲಭ್ಯಗಳನ್ನು ಪುನ: ನೀಡುವುದು, ಭಾರತೀಯ ಜೀವ ವಿಮಾ ನಿಗಮ ಸೇರಿ ಹಲವು ಸಾರ್ವಜನಿಕ ರಂಗದ ಉದ್ದಿಮೆಗಳ ಖಾಸಗೀರಕರಣ ಮಾಡುವುದನ್ನು ಕೂಡಲೇ ಕೈ ಬಿಡುವುದು, ಕೇಂದ್ರ ಸರ್ಕಾರ ಕೂಡಲೇ ರಾಜ್ಯದ ಪಾಲಿನ ಜಿ.ಎಸ್.ಟಿ. ಹಣವನ್ನು ಬಿಡುಗಡೆ ಮಾಡಬೇಕು. ಹಲವು ಕಾರ್ಮಿಕ ವಿರೋಧಿ ಹಾಗೂ ರೈತ- ವಿರೋಧಿ ಮಸೂದೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಒಕ್ಕೂಟದ ಪದಾಧಿಕಾರಿಗಳು ಮಂಡಿಸಿದರು.

ಚನ್ನಾರಡ್ಡಿ ಹೇಮಂಟಿ, ಎಸ್.ಜಿ.ಸಂಗಾಪುರ, ಮಂಜುನಾಥ ಭಂಟನೂರ, ಎಸ್.ವೈ.ಶಿಂಗೆ, ದುಂಡಪ್ಪ ಬಗಲಿ, ಸಂಜೀವ ಹೆಬ್ಬಿ, ಸಿದ್ರಾಮಯ್ಯ ಪೂಜಾರಿ, ಆರ್.ಎಸ್.ಮೆಣಸಗಿ ಇದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.