ಹೊಸ ಇತಿಹಾಸ ಬರೆದ ಇ-ಲೋಕ್ಅದಾಲತ್

0

Gummata Nagari : Bijapur News

ಬಿಜಾಪುರ : ಕರ್ನಾಟಕ ರಾಜ್ಯದಲ್ಲಿ ವಿನೂತನವಾಗಿ ದಿನಾಂಕಃ 19.09.2020ರಂದು ಆಯೋಜನೆ ಮಾಡಿದ ಮೇಘಾ ಈ-ಲೋಕ ಅದಾಲತ್‌ನಲ್ಲಿ ಬಿಜಾಪುರ ಜಿಲ್ಲೆಯಲ್ಲಿ ಈ-ಲೋಕ್ ಅದಾಲತ್‌ಗಾಗಿ ಗುರುತಿಸಿದ್ದ ಒಟ್ಟು 10395 ಪ್ರಕರಣಗಳು ಪೈಕಿ 8921 ಪ್ರಕರಣಗಳನ್ನು ಈ-ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ವೆಂಕಣ್ಣ. ಬಿ. ಹೊಸಮನಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿ.ಕಾ.ಸೇ.ಪ್ರಾಧಿಕಾರ ತಿಳಿಸಿದ್ದಾರೆ.

ಅದರಂತೆ ಕರ್ನಾಟಕ ರಾಜ್ಯದಲ್ಲಿ ನಡೆದ 30 ಜಿಲ್ಲೆಗಳ ಈ-ಲೋಕ್ ಅದಾಲತ್ ಅಂಕಿ ಸಂಖ್ಯೆಗಳನ್ನು ಗಣನೆಗೆ ತೆಗೆದುಕೊಂಡಾಗ ಬಿಜಾಪುರ ಜಿಲ್ಲೆ ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿದವರ ಪೈಕಿ ಮೊದಲ 3ನೇ ಸ್ಥಾನದಲ್ಲಿದೆ.

ಈ-ಲೋಕ್ ಅದಾಲತ್‌ನಲ್ಲಿ ಬಿಜಾಪುರ ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ರಾಜಿಗೆ ಒಳಪಡಬಹುದಾದ ಎಲ್ಲಾ ಕ್ರೀಮಿನಲ್ ಪ್ರಕರಣಗಳನ್ನು ವರ್ಗಾವಣೆಗಳ ಲಿಖೀತ ಕಾಯ್ದೆಯ ಪ್ರಕರಣಗಳು, ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ಕೋರಿರುವ ಪ್ರಕರಣಗಳು, ವಿಚ್ಛೇದನವನ್ನು ಹೊರತುಪಡಿಸಿ ಇರುವ ಕೌಟುಂಬಿಕ ವ್ಯಾಜ್ಯಗಳು ವಿಭಾಗ ಕೋರಿರುವ ದಾವೆಗಳು ಹಾಗೂ ಇತರೆ ಸಿವಿಲ್ ವ್ಯಾಜ್ಯಗಳನ್ನು ಮಾನ್ಯ ಕನಾ9ಟಕ ಉಚ್ಛ ನ್ಯಾಯಾಲಯ ಎಸ್.ಓ.ಪಿ. ಪ್ರಕಾರ ವಿಡಿಯೋ ಕಾನ್ಫರನ್ಸ್ ಮೂಲಕ ಇತ್ಯರ್ಥಪಡಿಸಲಾಗಿದೆ.

ಈ-ಲೋಕ್ ಅದಾಲತ್ ಯಶಸ್ವಿಯಾಗಲು ಹಾಗೂ ಬಿಜಾಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಈ-ಲೋಕ್ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ-ಲೋಕ್ ಅದಾಲತ್ ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಕಕ್ಷಿದಾರರಿಗೂ, ನ್ಯಾಯವಾದಿಗಳಿಗೂ, ವಿಮಾ ಕಂಪನಿಯ ಅಧಿಕಾರಿಗಳಿಗೂ, NWKSRTC ಯ ಕಾನೂನು ಅಧಿಕಾರಿ ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸದಸ್ಯ ಕಾರ್ಯದರ್ಶಿಯಾದ ನಾನು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈ-ಲೋಕ್ ಅದಾಲತ್ ಬಗ್ಗೆ ಎಲ್ಲಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಶ್ರಮಿಸಿದ ಬಿಜಾಪುರ ಜಿಲ್ಲೆಯ ಎಲ್ಲಾ ಪತ್ರಿಕಾ ಮಿತ್ರರಿಗೂ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಅಂಗನವಾಡಿಯ ಮೇಲ್ವಿಚಾರಿಕಿಯರು ಹಾಗೂ ಕಾರ್ಯಕರ್ತೆಯರಿಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸದಸ್ಯ ಕಾರ್ಯದರ್ಶಿಯಾದ ನಾನು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇವರೆಲ್ಲರೂ ಸಹಕರಿಸಿ ಗ್ರಾಮೀಣ ಮಟ್ಟದಲ್ಲಿಯೂ ಸಹ ಈ-ಲೋಕ್ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಇವರೆಲ್ಲರ ಸಹಕಾರದಿಂದ ಬಿಜಾಪುರ ಜಿಲ್ಲೆಯಲ್ಲಿ ಈ ಹಿಂದೆ ಜರುಗಿದ ಬೃಹತ್ ಲೋಕ್ ಅದಾಲತ್‌ಗಿಂತ ಹೆಚ್ಚಿನ ಪ್ರಕರಣಗಳು ಇತ್ಯರ್ಥಪಡಿಲಾಗಿದೆ.

ಆದ್ದರಿಂದ ತಾವು ಈ ವಿಷಯ ಕುರಿತು ವಿಜಯಪೂರ ಜಿಲ್ಲೆಯ ಎಲ್ಲಾ ದಿನ ಪತ್ರಿಕೆಗಳಲ್ಲಿ ಹಾಗೂ ಟಿ.ವಿ. ಸುದ್ಧಿ ಮಾಧ್ಯಮಗಳಲ್ಲಿ ಪ್ರಚಾರಪಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು ತಮ್ಮಲ್ಲಿ ಕೋರುವಂತೆ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಜಯಪೂರ ಇವರಿಂದ ನಿದೇಶನಗೊಂಡಿದ್ದೇನೆ. ಆದ್ದರಿಂದ ಈ ವಿಷಯದ ಕುರಿತು ತಾವು ಸೂಕ್ತ ಕ್ರಮ ಜರುಗಿಸಬೇಕೆಂದು ಕೋರುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.