ತಳವಾರ, ಪರಿವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಿ

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮನವಿ

0

Gummata Nagari : Bijapur News

ಇಂಡಿ : ರಾಜ್ಯದ ತಳವಾರ ಮತ್ತು ಪರಿವಾರ ಸಮುದಾಯಗಳಿಗೆ ಪರಿಶಿಷ್ಠ ಪಂಗಡ (ಎಸ್.ಟಿ) ಪ್ರಮಾಣ ಪತ್ರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದೇನೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ (ಅಪ್ಪು) ಪಟ್ಟಣಶೆಟ್ಟಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮುದಾಯ ಬಾಂಧವರು ಯಾವುದೇ ಆತಂಕ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ. ನಿಮ್ಮ ಪ್ರಮಾಣ ಪತ್ರ ಸಿಕ್ಕೇ ಸಿಗುತ್ತದೆ. ಈಗಾಗಲೆ ಕೇಂದ್ರ ಸರಕಾರ ನಿಮ್ಮ ಸಮುದಾಯಕ್ಕೆ ಎಸ್.ಟಿ. ಪ್ರಮಾಣ ನೀಡುವಂತೆ ಆದೇಶ ಹೊರಡಿಸಿದೆ. ಆದರೆ ಕೆಲವೊಂದು ಕಾರಣಗಳಿಂದ ಪ್ರಮಾಣ ಪತ್ರ ನೀಡಲು ತಡವಾಗುತ್ತಿದೆ. ಆದರೆ ಖಂಡಿತವಾಗಿಯೂ ನಿಮ್ಮ ಸಮುದಾಯಕ್ಕೆ ಅನ್ಯಾಯವಾಗಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಿಮ್ಮ ಸಮುದಾಯಕ್ಕೆ ಅನ್ಯಾಯವಾಗಲು ಬಿಡಲ್ಲ. ರಾಜ್ಯದ ಅನೇಕ ಶಾಸಕರು, ಸಚಿವರು, ಸಂಸದರು ಸಹ ತಳವಾರ ಮತ್ತು ಪರಿವಾರ ಸಮುದಾಯಗಳಿಗೆ ಎಸ್.ಟಿ. ಪ್ರಮಾಣ ಪತ್ರ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ನೀವು ಆತಂಕಪಡುವ ಅವಶ್ಯಕತೆ ಇಲ್ಲ ನಿಮಗೆ ಸರಕಾರ ಎಸ್.ಟಿ. ಪ್ರಮಾಣ ಪತ್ರ ನೀಡುತ್ತದೆ ಎಂದು ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಪಟ್ಟಣಶೆಟ್ಟಿ ಭರವಸೆಯ ಮಾತುಗಳನ್ನು ಹೇಳಿದ್ದಾರೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.