ನಗರದ ರಸ್ತೆಗಳನ್ನು ತಕ್ಷಣ ಸರಿಪಡಿಸುವಂತೆ ಸೂಚನೆ

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

0

ಬಿಜಾಪುರ: ಸಾರ್ವಜನಿಕರ ಹಿತದೃಷ್ಠಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರದ ರಸ್ತೆ ಗುಂಡಿಗಳನ್ನು ತಕ್ಷಣ ಸರಿಪಡಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿದು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿದ್ದ ಅವರು ನಗರದಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು. ಯಾವುದೇ ರೀತಿಯ ಅಪಘಾತ ಸಾವು ಪ್ರಕರಣಗಳು ದಾಖಲಾದ ಸಂದರ್ಭದಲ್ಲಿ ಸಂಬAಧಪಟ್ಟ ಪಾಲಿಕೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆಗೆ ಸಂಬ0ಧಪಟ್ಟ0ತೆ ಈಗಾಗಲೆ ಕರಡು ಕ್ರೀಯಾ ಯೋಜನೆ ಸಿದ್ದಪಡಿಸಲಾಗಿದ್ದು, ಆಡಳಿತ ಮತ್ತು ಮುಂದಾಳತ್ವ, ಜಿಲ್ಲಾ ಕ್ರೀಯಾ ಯೋಜನೆ, ಜಿಲ್ಲೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳ ವಿಶ್ಲೇಷಣೆ, ಮಾಹಿತಿ ಮತ್ತು ದತ್ತಾಂಶಗಳು, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಪ್ರವರ್ಧನ ಹಾಗೂ ಇಂಜನಿಯರಿ0ಗ್ ಚಟುವಟಿಕೆಗಳು, ಅಪಘಾತ ಮತ್ತು ತುರ್ತು ಚಿಕಿತ್ಸೆ, ಮೇಲ್ವಿಚಾರಣೆ, ಪರಿಶೀಲನೆ ಮತ್ತು ನಿರಂತರ ಮೌಲ್ಯಮಾಪನ ಹಾಗೂ ರಸ್ತೆ ಸುರಕ್ಷತೆ ಅರಿವು ಮತ್ತು ತರಬೇತಿ ಚಟುವಟಿಕೆಗಳನ್ನು ಪರಿಣಾಮಕಾರಿ ಹಮ್ಮಿಕೊಳ್ಳುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅದರಂತೆ ಈ ಕ್ರೀಯಾ ಯೋಜನೆಯನ್ವಯ ರಸ್ತೆ ಸುಧಾರಣೆ ಮತ್ತು ಸಾಧನ ಸಲಕರಣೆಗಳ ಅಳವಡಿಕೆಗೆ ಪ್ರಾದೇಶಿಕ ಸಾರಿಗೆ ಕೇಂದ್ರ ಕಚೇರಿಯಿಂದ ಅನುದಾನ ಲಭ್ಯವಾಗಲಿದ್ದು, ಪೊಲೀಸ್ ಇಲಾಖೆ ಮೂಲಕ ರಸ್ತೆ ಸುರಕ್ಷತೆಗೆ ಸಂಬ0ಧಪಟ್ಟ0ತೆ ರಸ್ತೆ ಸಾಧನ ಸಲಕರಣೆಗಳ ಖರ್ಚು-ವೆಚ್ಚ ವರದಿ ಪಡೆಯಬೇಕು, ಮಹಾನಗರ ಪಾಲಿಕೆಯೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸುವಂತೆ ಪ್ರ‍್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಗೋದಾವರಿ ಹೋಟೆಲ್‌ನಿಂದ ಇಟಗಿ ಪೇಟ್ರೋಲ್ ಪಂಪ್, ಅಲ್ ಅಮೀನ್ ಮತ್ತು ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ವರೆಗಿನ ಚತುಶ್ಪತ ರಸ್ತೆಯನ್ನು ಮಳೆಗಾಲ ಮುಗಿಯುವ ವರೆಗೆ ತಾತ್ಕಾಲಿಕವಾಗಿ ತಗ್ಗು-ಗುಂಡಿಗಳನ್ನು ಮುಚ್ಚಿ ಸರಿಪಡಿಸಬೇಕು. ರಸ್ತೆ ಮೇಲಿನ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕನಕದಾಸ ವೃತ್ತದಿಂದ ಕಾಮತ್ ಹೋಟೆಲ್ ವರೆಗಿನ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ರಾಷ್ಟಿಯ ಹೆದ್ದಾರಿ ಸುರಕ್ಷತೆಯ ಹಿನ್ನಲೆಯಲ್ಲಿ ಈ ಸಭೆಗೆ ಗೈರು ಹಾಜರಾದ ಕಲಬುರರ್ಗಿ ಹಾಗೂ ಸೋಲ್ಲಾಪೂರ ರಾಷ್ಟಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಸಮರ್ಪಕ ಉತ್ತರ ಪಡೆಯುವಂತೆ ಜಿಲ್ಲಾಧಿಕಾರಿಗಳು ಸಂಬ0ಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಐದು ವೃತ್ತಗಳಾದ ಇಟಗಿ ಪಂಪ್ ವೃತ್ತ, ವಲ್ಲಬಾಯಿ ವೃತ್ತ, ತಿಕೋಟಾ ವೃತ್ತ, ಸಿಂದಗಿ ವೈ ಜಂಕ್ಷನ್, ಬಬಲೇಶ್ವರ ವೈ ಜಂಕ್ಷನ್ ಸುಧಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿ ತಿಳಿಸಿದರು. ಈ ಕುರಿತು ಟ್ರಾಫಿಕ್ ಇಂಚಾರ್ಜ ಮತ್ತು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಳ್ಳಿ ಸ್ವಾಗತಿಸಿ ಅವಶ್ಯಕ ಮಾಹಿತಿ ನೀಡಿದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.