ರೈತ, ಕಾರ್ಮಿಕ ವಿರೋಧಿ ಕಾನೂನು ಹಿಂಪಡೆಯಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

0

Gummata Nagari : Bijapur News

ಬಿಜಾಪುರ : ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ಬಿಜಾಪುರದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ನಗರದ ಶ್ರೀ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ರ‍್ಯಾಲಿ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು.

ಪ್ರತಿಭಟನಾ ನಿರತ ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರು ಕೇಂದ್ರ ಸರಕಾರದ ಕಾರ್ಮಿಕ, ರೈತ, ಜನ ವಿರೋಧಿ ನೀತಿಗಳಿಗೆ ಧಿಕ್ಕಾರ, ಕಾರ್ಮಿಕ ಕಾನೂನು ತಿದ್ದುಪಡಿ ನಿಲ್ಲಿಸಿ, ಸಾರ್ವಜನಿಕೆ ಉದ್ದಿಮೇಗಳ ಖಾಸಗೀಕರಣ ವಾಪಸ್ಸ್ ಪಡೆಯಿರಿ ಎಂಬಿತ್ಯಾದಿ ಘೋಷಣೆ ಕೂಗಿದರು. ವಿವಿಧ ಗುತ್ತಿಗೆ ಕಾರ್ಮಿಕರು, ದಿನಗೂಲಿ ನೌಕರರು, ರೈತ-ಕೃಷಿ ಕಾರ್ಮಿಕರು, ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು, ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಹಿರಿಯ ಕಾರ್ಮಿಕ ಮುಖಂಡ ಭೀಮಶಿ ಕಲಾದಗಿ ಮಾತನಾಡಿ, ಕೇಂದ್ರ ಸರ್ಕಾರ ಕೋವಿಡ್ ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡು ಇಡೀ ಕಾರ್ಮಿಕ ರೈತ ಜನಸಮುದಾಯ ಹಕ್ಕನ್ನು ಕಿತ್ತುಕೊಳ್ಳುತ್ತಿದೆ. ಇವತ್ತಿನ ಕಾರ್ಮಿಕ ಕಾನೂನುಗಳ ತಿದ್ದುಪಡಿ ಮಾಡುವ ಮುಖಾಂತರ ಈ ದೇಶದ ಬಂಡವಾಳಿಗರ ಪಾದಸೇವೆ ಮಾಡುತ್ತ ಇಡೀ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಇನ್ನಾದರೂ ಕಾರ್ಮಿಕರ ಪರವಾದ ನೀತಿಗಳನ್ನು ಜಾರಿ ಮಾಡುವ ಮೂಲಕ ಜನಸಮುದಾಯವನ್ನು ರಕ್ಷಿಸಬೇಕು ಮತ್ತು ಅಗತ್ಯ ವಸ್ತುಗಳು ಜನ ಸಾಮಾನ್ಯರಿಗೆ ಸರಾಗವಾಗಿ ಸಿಗುವಂತಾಗಿ ಕಾರ್ಮಿಕರು ಉತ್ತಮ ಜೀವನ ನಡೆಸಲು ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಆರ್‌ಕೆಎಸ್ ಜಿಲ್ಲಾ ಸಂಚಾಲಕ ಬಾಳು ಜೇವೂರ ಮಾತನಾಡಿ, ಸಂಸತ್ತಿನಲ್ಲಿ ಅವಸರ ಅವಸರವಾಗಿ 44 ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ 4 ಸಂಹಿತೆಗಳನ್ನಾಗಿ ಮಾಡಿ ಕಾರ್ಮಿಕರಿಗೆ ಅಲ್ಪಸ್ವಲ್ಪ ರಕ್ಷಣೆ ಮಾಡುತ್ತಿದ್ದ ಕಾಯ್ದೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ನೂತನ ಕಾರ್ಮಿಕ ಕಾಯ್ದೆಗಳ ಅನುಷ್ಠಾನದಿಂದಾಗಿ ದೇಶದ ಶೇ.74 ರಷ್ಟು ಕಾರ್ಖಾನೆಗಳು ಕಾಯ್ದೆಯ ನಿಯಮಗಳ ವ್ಯಾಪ್ತಿಯಲ್ಲಿ ದೂರ ಉಳಿಯುತ್ತವೆ. ಈಗ ಪರಿಚಯಿಸುತ್ತಿರುವ ಸೀಮಿತ ಅವಧಿಯ ಉದ್ಯೋಗದಿಂದ ಖಾಯಂ ಉದ್ಯೋಗಗಳು ಮಾಯವಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಬ್ಯಾಂಕ್ ಯೂನಿಯನ್‌ನ ರಾಷ್ಟಿçÃಯ ಕಾರ್ಯದರ್ಶಿ ಜಿ.ಜಿ ಗಾಂಧಿ ಮಾತನಾಡಿದರು. ಕಾರ್ಮಿಕ ಧುರೀಣರಾದ ಲಕ್ಷಣ ಹಂದ್ರಾಳ, ಸುನೀಲ ಸಿದ್ರಾಮಶೆಟ್ಟಿ, ಸುನಂದಾ ನಾಯಕ, ಜಯಶ್ರೀ ಕಂಬಾರ, ಸುಮಂಗಲಾ ಆನಂದಶೆಟ್ಟಿ, ಚಂದ್ರಶೇಖರ ಗಂಟೆಪ್ಪಗೋಳ, ಎಸ್.ಆರ್. ನಾಯಕ, ಭಾರತಿ ದೇವಕತೆ, ಅಂಬಿಕಾ ಒಳಸಂಗ, ಲೈಲಾ ಪಠಾಣ, ಸುರೇಖಾ ರಜಪೂತ, ಈರಣ್ಣ, ಪಾಲ್ಗೊಂಡಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.