ಸಾರವಾಡ ಕೆರೆ ದುರಸ್ತಿಗೆ ಸೂಚನೆ

ನೆರೆಪೀಡಿತ ಗ್ರಾಮಗಳಿಗೆ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

0

Gummata Nagari : Bijapur News

ಬಿಜಾಪುರ : ಡೋಣಿ ನದಿ ಪ್ರವಾಹದಿಂದ ತೊಂದರೆ ಎದುರಿಸುತ್ತಿರುವ ಸಾರವಾಡ, ಧನ್ಯಾಳ, ತೋನಶ್ಯಾಳ, ದದಾಮಟ್ಟಿ ಮೊದಲಾದ ಗ್ರಾಮಗಳಿಗೆ ತಹಶೀಲ್ದಾರ ಮಲ್ಲಿಕಾರ್ಜುನ ಅರಕೇರಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿ ಅವಲೋಕಿಸಿತು.

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿದ ಅಧಿಕಾರಿಗಳು ಜನರ ಸಮಸ್ಯೆ ಆಲಿಸುವ ಜೊತೆಗೆ, ನದಿ ತೀರಕ್ಕೆ ಹೋಗದಂತೆ ಮನವಿ ಮಾಡಿಕೊಂಡರು.

ಮಳೆಯಿಂದಾಗಿ ಸಾರವಾಡದಲ್ಲಿರುವ ಮಲ್ಲಪ್ಪ ಕೆರೆ (ಕೃತಕ ಕೆರೆಯ) ಒಡ್ಡು ಒಡೆದು ಹೋಗಿರುವ ಪರಿಣಾಮ ನೀರು ಸಾಕಷ್ಟು ಜಮೀನುಗಳಿಗೆ ನುಗ್ಗಿ ಬೆಳೆಹಾನಿಯಾಗಿರುವ ಜಮೀನುಗಳಿಗೂ ತಹಶೀಲ್ದಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ತಕ್ಷಣವೇ ಕೆರೆಯ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿವರಣೆ ನೀಡಿದ ತಹಶೀಲ್ದಾರ ಮಲ್ಲಿಕಾರ್ಜುನ ಅರಕೇರಿ, ಡೋಣಿ ನದಿ ಪ್ರವಾಹದಿಂದಾಗಿ ಸಾರವಾಡ, ತೋನಶ್ಯಾಳ, ದದಾಮಟ್ಟಿ ಮೊದಲಾದ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದೆ. ಸುಮಾರು 300 ಹೆಕ್ಟೇರ್‌ಗೂ ಅಧಿಕ ಪ್ರಮಾಣದಲ್ಲಿ ಈರುಳ್ಳಿ, ತೊಗರಿ ಮೊದಲಾದ ಬೆಳೆಗಳು ಹಾನಿಗೀಡಾಗಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ, ಬೆಳೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳು ಮಾಹಿತಿ ಸಂಗ್ರಹಣೆ ಕಾರ್ಯ ಕೈಗೊಂಡಿದ್ದು, ಡಾಟಾ ಎಂಟ್ರಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ನಂತರ ರೈತರ ಖಾತೆಗಳಿಗೆ ಪರಿಹಾರ ಜಮಾವಣೆಯಾಗಲಿದೆ ಎಂದು ವಿವರಿಸಿದರು. ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನರು ಸಹ ಎಚ್ಚರಿಕೆಯಿಂದ ಇರಬೇಕು, ನದಿತೀರಕ್ಕೆ ಹೋಗಬಾರದು, ಏನಾದರೂ ಸಮಸ್ಯೆ ಎದುರಾದರೆ ತಕ್ಷಣವೇ ಸಹಾಯವಾಣಿಗೆ ಸಂಪರ್ಕಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ಕಂದಾಯ ನಿರೀಕ್ಷಕ ಎಸ್.ಎ. ಗುಮಾಸ್ತೆ, ಗ್ರಾಮ ಲೆಕ್ಕಾಧಿಕಾರಿ ಎಸ್.ಎಸ್. ಯಕ್ಸಂಬಿ, ರವಿಪ್ರಕಾಶ ಕಾಂಬಳೆ ಪಾಲ್ಗೊಂಡಿದ್ದರು.

ಕಂದಾಯ ನಿರೀಕ್ಷಕ ಎಸ್.ಎ. ಗುಮಾಸ್ತೆ ಗ್ರಾಮ ಲೆಕ್ಕಾಧಿಕಾರಿಗಳಾದ ಎಸ್.ಎಸ್.ಯಕ್ಸಂಬಿ, ರವಿಪ್ರಕಾಶ ಕಾಂಬಳೆ, ಸಾರವಾಡ ಹಾಗೂ ಗ್ರಾಮಸ್ಥರು ಇದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.