ಬ್ರಿಜ್ ದುರಸ್ತಿಗೆ ಮುಂದಾದ ಅಧಿಕಾರಿಗಳು

ಗುಮ್ಮಟ ನಗರಿ ವರದಿ ಎಫೆಕ್ಟ್

0

Gummata Nagari : Bijapur News

ತಾಂಬಾ : ಬ್ರಿಜ್ ಮೇಲಿನ ರಸ್ತೆಯಲ್ಲಿ ತೆಗ್ಗು ಗುಂಡಿಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಗುಮ್ಮಟ ನಗರಿ ಮಾಡಿದ ವರದಿಗೆ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಶನಿವಾರ ಬ್ರಿಜ್ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.

ಇಂಡಿ ತಾಲೂಕಿನ ತಾಂಬಾ ಗ್ರಾಮದ ದೊಡ್ಡ ಹಳ್ಳದ ಬ್ರಿಜ್ ಮೇಲಿನ ತೆಗ್ಗು ಗುಂಡಿಗಳಲ್ಲಿ ನಿಂತ ನೀರಿನಿಂದ ಸಾರ್ವಜನಿಕರು ಸಂಚರಿಸಲಾಗದೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಗುಮ್ಮಟ ನಗರಿ ಪತ್ರಿಕೆ ತನ್ನ ವೆಬ್‌ಸೈಟ್‌ನಲ್ಲಿ ಸೆ.17ರಂದು ಸುದ್ದಿ ಪ್ರಸಾರ ಮಾಡಿತ್ತು. ಜೊತೆಗೆ ಪತ್ರಿಕೆಯಲ್ಲಿ ಪ್ರಕಟಿಸಿತ್ತು. ವರದಿ ಕಂಡು ಎಚ್ಚೆತ್ತ ಪಿಡಬ್ಲ್ಯೂಡಿ ಅಧಿಕಾರಿಗಳು ಬ್ರಿಜ್ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಪತ್ರಿಕೆಯ ಅಭಿವೃದ್ಧಿಪರವಾದಂತಹ ಸುದ್ದಿಗೆ ಓದುಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.